Loksabha poll 2024

ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸುವ ಹೋರಾಟ ಇಂದಿನಿಂದ ಆರಂಭ: ಮಲ್ಲಿಕಾರ್ಜುನ್ ಖರ್ಗೆ
ದೇಶದ 102 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ಎಚ್ಚರಿಕೆಯಿಂದ ಮತ ಚಲಾಯಿಸುವಂತೆ ಮತದಾರರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮನವಿ ಮಾಡಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ ಬೆನ್ನಲ್ಲೇ 'ಕೈ'ಗೆ ಹಿನ್ನಡೆ: ರಾಜಸ್ಥಾನದಲ್ಲಿ 400 ಕಾರ್ಯಕರ್ತರು ಕಾಂಗ್ರೆಸ್ ಗೆ ಗುಡ್ ಬೈ!
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಕಾಂಗ್ರೆಸ್ ಭಾರೀ ಹಿನ್ನಡೆಯುಂಟಾಗಿದೆ. ರಾಜಸ್ಥಾನದಲ್ಲಿ ಬರೋಬ್ಬರಿ 400 ಕಾರ್ಯಕರ್ತರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಸಭೆ ಚುನಾವಣೆ: ಗಡಿ ಭಾಗಗಳಲ್ಲಿ ಸಾರಿಗೆ ಇಲಾಖೆಯಿಂದ ವಾಹನ ತಪಾಸಣೆ ಹೆಚ್ಚಳ
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಇದರ ಬೆನ್ನಲ್ಲೇ ಯಾವುದೇ ಅಕ್ರಮಗಳು ನಡೆಯದಂತೆ ಸಾರಿಗೆ ಇಲಾಖೆಯು ರಾಜ್ಯದಾದ್ಯಂತ ವಾಹನ ತಪಾಸಣೆಯನ್ನು ತೀವ್ರಗೊಳಿಸಿದೆ.

ಲೋಕಸಭಾ ಚುನಾವಣೆ: ಇದುವರೆಗೂ 79,000ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆಯ ದೂರು ಸ್ವೀಕಾರ; EC ಮಾಹಿತಿ
ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ಇಲ್ಲಿಯವರೆಗೂ ಸಿ-ವಿಜಿಲ್ ಆ್ಯಪ್ ಮೂಲಕ 79,000 ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆಯ ದೂರು ಸ್ವೀಕರಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ.

ನೀತಿ ಸಂಹಿತೆ ಜಾರಿ: ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ, ಅಗತ್ಯ ದಾಖಲೆಗಳ ಇಟ್ಟುಕೊಳ್ಳುವಂತೆ ಚುನಾವಣಾ ಆಯೋಗ ಸೂಚನೆ
ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದು, ಚೆಕ್ ಪೋಸ್ಟ್ ಗಳಲ್ಲ ತಪಾಸಣೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಸರಕು ಸಾಗಣೆ ಮಾಡುವವರು ಸೂಕ್ತ ಕಾನೂನು ದಾಖಲೆಗಳನ್ನು ಹೊಂದಿರಬೇಕು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಂಗಳವಾರ ಸೂಚನೆ ನೀಡಿದೆ.

ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನ ಗೆದ್ದು ತೋರಿಸಿ: ಕಾಂಗ್ರೆಸ್'ಗೆ ಬೊಮ್ಮಾಯಿ ಸವಾಲು
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಬ್ ಕೀ ಬಾರ್ 50 ಪಾರ್ ಅಂತಾ ಹೇಳೋ ಧೈರ್ಯ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದ್ದಾರೆ.

ಈಶ್ವರಪ್ಪ ಬೆನ್ನಲ್ಲೇ BSY ವಿರುದ್ಧ ಮತ್ತೋರ್ವ ನಾಯಕ ಸಿಡಿಮಿಡಿ: ನಡುನೀರಲ್ಲಿ ಕೈ ಬಿಟ್ಟಿದ್ದಾರೆ- ಮಾಧುಸ್ವಾಮಿ ಕಿಡಿ
ಕೆಎಸ್ ಈಶ್ವರಪ್ಪ ಬೆನ್ನಲ್ಲೇ ಇದೀಗ ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮೋದಿ 10 ವರ್ಷಗಳ ಆಡಳಿತ ಟ್ರೇಲರ್ ಅಷ್ಟೇ, 'ಪಿಕ್ಚರ್ ಅಭಿ ಬಾಕಿ ಹೈ': ಫಡ್ನವಿಸ್
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ನಡೆದ ಆಡಳಿತ ಟ್ರೈಲರ್‌ಅಷ್ಟೇ, ಪಿಕ್ಟರ್ ಇನ್ನೂ ಬಾಕಿ ಇದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಅವರು ಇನ್ನೂ 10 ವರ್ಷ ಕಾಲ ದೇಶವನ್ನು ಆಳುತ್ತಾರೆ ಎಂಬ ಆಶಾಭಾವವನ್ನು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮಂಗಳವಾರ ವ್ಯಕ್ತಪಡಿಸಿದರು.

ಹೊಸ ಮುಖಗಳಿಗೆ ಪಕ್ಷ ಅವಕಾಶ ನೀಡಿದರೆ ಸ್ವಾಗತಿಸುತ್ತೇನೆ: ನಳಿನ್ ಕುಮಾರ್ ಕಟೀಲ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹೊಸಬರು ಸ್ಪರ್ಧಿಸಲು ಪಕ್ಷ ಅವಕಾಶ ನೀಡಿದ್ದೇ ಆದರೆ, ಅದನ್ನು ಸ್ವಾಗತಿಸುತ್ತೇನೆಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳವಾರ ಹೇಳಿದರು.

