Loksabha poll

ಕೇಂದ್ರ ಬಜೆಟ್ 2024-25: ಆಯವ್ಯಯ ಮಂಡನೆ ಮುಕ್ತಾಯ, ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸುತ್ತೇವೆ; ನಿರ್ಮಲಾ ಸೀತಾರಾಮನ್
ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮುಕ್ತಾಯಗೊಳಿಸಿದ್ದು, ಸರ್ಕಾರದ ಆರ್ಥಿಕ ಸ್ಥಿತಿಗತಿ ಕುರಿತು ಸಂಸತ್ತಿನಲ್ಲಿ ಶ್ವೇತಪತ್ರ ಹೊರಡಿಸುತ್ತೇವೆಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಸಿದ್ಧತೆ: ಜನವರಿ 27ಕ್ಕೆ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ರಾಜ್ಯ ಬಿಜೆಪಿ ಜನವರಿ 27 ರಂದು ಕಾರ್ಯಕಾರಿಣಿ ಸಭೆ ನಡೆಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆ: ಮತಬೇಟೆಗೆ ಬಿಜೆಪಿ ಭರ್ಜರಿ ಸಿದ್ಧತೆ, ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಭೇಟಿ
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮತಬೇಟೆಗಾಗಿ ಬಿಜೆಪಿ ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ, ಇದರಂತೆ ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಒಂದಲ್ಲ 3 ಡಿಸಿಎಂ ಸ್ಥಾನಕ್ಕೆ ನಾಯಕರ ಪಟ್ಟು: ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕಾಂಗ್ರೆಸ್'ಗೆ ಹೊಸ ತಲೆನೋವು ಶುರು!
ಲೋಕಸಭೆ ಚುನಾವಣೆ ಸಿದ್ಧತೆ ನಡುವಲ್ಲೇ ರಾಜ್ಯಕ್ಕೆ ಹೆಚ್ಚಿನ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಸಂಪುಟ ಸಚಿವರು ಸೇರಿದಂತೆ ಹಲವು ನಾಯಕರು ಪಟ್ಟು ಹಿಡಿದಿದ್ದು ಇದರಿಂದಾಗಿ ಕಾಂಗ್ರೆಸ್‌ಗೆ ಹೊಸ ತಲೆನೋವು ಶುರುವಾಗಿದೆ.

ಲೋಕಸಭಾ ಚುನಾವಣೆಗೆ ಬಿಜೆಪಿ ತಯಾರಿ: 'ಆಯಾರಾಂ ಗಯಾರಾಂ' ಪಕ್ಷಾಂತರಿಗಳಿಗೆ ಬ್ರೇಕ್ ಹಾಕಲು ಸಮಿತಿ ರಚನೆ, ನಡ್ಡಾ ನಿರ್ಧಾರ
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಅನ್ಯಪಕ್ಷಗಳಿಂದ ಬಿಜೆಪಿಗೆ ಬರಲು ಇಚ್ಛಿಸುವವರ ಪೂರ್ವಾಪರ ಪರಿಶೀಲನೆ ನಡೆಸಲು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಹೊಸ ಸಮಿತಿಯನ್ನು ರಚನೆ ಮಾಡಿದ್ದಾರೆ.

ಲೋಕಸಭಾ ಚುನಾವಣೆ 2024: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆ?
2024ರ ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಈ ನಡುವಲ್ಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಡೆಯಲು ಹಲವರ ಹೆಸರುಗಳು ಕೇಳಿಬರುತ್ತಿದೆ.

ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲುವ ವಿಶ್ವಾಸವಿದೆ: ಸಲೀಂ ಅಹ್ಮದ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಬುಧವಾರ ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್'ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಡಿಮ್ಯಾಂಡ್!
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯಾಗಬಲ್ಲೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶನಿವಾರ ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಬಿ.ಎಸ್. ಯಡಿಯೂರಪ್ಪ
ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರ ನೇಮಕ ವಿಳಂಬವಾಗುತ್ತಿರುವುದನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

