Loksabha polls 2024

ಬಿಹಾರ: ಏಕೈಕ ಎನ್ ಡಿಎ ಮುಸ್ಲಿಂ ಸಂಸದ ಆರ್‌ಜೆಡಿ ಸೇರ್ಪಡೆ
ಲೋಕಸಭಾ ಚುನಾವಣೆ ನಡುವೆಯೇ ಬಿಹಾರದಲ್ಲಿ ಎನ್ ಡಿಎಯ ಏಕೈಕ ಮುಸ್ಲಿಂ ಸಂಸದ ಮೆಹಬೂಬ್ ಅಲಿ ಕೈಸರ್ ಭಾನುವಾರ ಆರ್ ಜೆಡಿಗೆ ಸೇರ್ಪಡೆಗೊಂಡಿದ್ದಾರೆ.

ಟಿವಿ ಡಿಬೆಟ್ ವೇಳೆ ಬಿಜೆಪಿ ನಾಯಕನ ಮೇಲೆ ಹಲ್ಲೆ: ವಿಡಿಯೋ
ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ಆಯೋಜಿಸಿದ ಚುನಾವಣಾ ಡಿಬೆಟ್ ನಲ್ಲಿ ಇಬ್ಬರು ವ್ಯಕ್ತಿಗಳು ಸ್ಥಳೀಯ ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ತಿಕಮ್ ಘಡದಲ್ಲಿ ನಡೆದಿದೆ. ನಜರ್‌ಬಾಗ್‌ನ ಮೈದಾನದಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದ್ದು, ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತದಾನ ನಡೆದ ಮರುದಿನವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಸರ್ವೇಶ್ ಸಿಂಗ್ ನಿಧನ!
ಮತದಾನ ನಡೆದ ಮರುದಿನವೇ ಮೊರಾದಾಬಾದ್‌ನ ಬಿಜೆಪಿ ಅಭ್ಯರ್ಥಿ ಸರ್ವೇಶ್ ಸಿಂಗ್ ನಿಧನರಾಗಿದ್ದಾರೆ. ಮೊರಾದಾಬಾದ್‌ನಲ್ಲಿ ನಿನ್ನೆಯಷ್ಟೇ ಮತದಾನ ನಡೆದಿತ್ತು.

DKS, HDK, Vijayendra ಮೂರು ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ FIR ದಾಖಲು!
ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ (MCC) ಉಲ್ಲಂಘಿಸಿದ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಲೋಕಸಭಾ ಚುನಾವಣೆ: ವಯನಾಡು ಕಾಂಗ್ರೆಸ್ ಅಭ್ಯರ್ಥಿ ಸೋಲು ನಿಶ್ಚಿತ- ಪ್ರಧಾನಿ ಮೋದಿ
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೇರಳದ ವಯನಾಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಸೋಲಲಿದ್ದು, ಆ ನಂತರ ಸುರಕ್ಷಿತ ಸ್ಥಾನವನ್ನು ಹುಡುಕಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಬೆಂಗಳೂರು: 'ಚೊಂಬು' ಹಿಡಿದು ಕಾಂಗ್ರೆಸ್ ವಿನೂತನ ಪ್ರತಿಭಟನೆ, ಕೇಂದ್ರದ ವಿರುದ್ಧ ಆಕ್ರೋಶ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ, ಮೋಸ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ಶನಿವಾರ ವಿನೂತನ ಪ್ರತಿಭಟನೆ ನಡೆಸಿತು.

ತಮಿಳುನಾಡು: ಪಟ್ಟಿಯಲ್ಲಿ ಮತದಾರರ ಹೆಸರು ನಾಪತ್ತೆ, ಮರು ಮತದಾನಕ್ಕೆ ಕೆ ಅಣ್ಣಾಮಲೈ ಒತ್ತಾಯ
ತಮಿಳುನಾಡಿನಲ್ಲಿ ನಿನ್ನೆ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ನಾಪತ್ತೆ ಕುರಿತು ದೂರುಗಳು ಬಂದಿದ್ದು, ಹೆಚ್ಚಿನ ಸಂಖ್ಯೆಯ ಮತದಾರರ ಹೆಸರು ನಾಪತ್ತೆಯಾಗಿರುವ ಸ್ಥಳಗಳಲ್ಲಿ ಮರು ಮತದಾನಕ್ಕೆ ಆಗ್ರಹಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.

ಲೋಕಸಭೆ ಚುನಾವಣೆ: ಮೊದಲ ಹಂತದಲ್ಲಿ ದೇಶಾದ್ಯಂತ 64ರಷ್ಟು, ತಮಿಳುನಾಡಿನಲ್ಲಿ ದಾಖಲೆಯ 72ರಷ್ಟು ಮತದಾನ
ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 102 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯಗೊಂಡಿದ್ದು. ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದ್ದು ವಿವಿಧ ರಾಜ್ಯಗಳ 102 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 63.7ರಷ್ಟು ಹಾಗೂ ತಮಿಳುನಾಡಿನಲ್ಲಿ 72ರಷ್ಟು ಮತದಾನವಾಗಿದೆ.

ದ್ವೇಷವನ್ನು ಸೋಲಿಸಿ ದೇಶದ ಮೂಲೆ ಮೂಲೆಯಲ್ಲೂ 'ಪ್ರೀತಿಯ ಅಂಗಡಿ ತೆರೆಯಿರಿ': ಮತದಾರರಿಗೆ ರಾಹುಲ್ ಗಾಂಧಿ
ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ದ್ವೇಷವನ್ನು ಸೋಲಿಸುವ ಮೂಲಕ ದೇಶದ ಮೂಲೆ ಮೂಲೆಗಳಲ್ಲಿ ‘ಮೊಹಬ್ಬತ್ ಕಿ ದುಕಾನ್’ ತೆರೆಯುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತದಾರರಿಗೆ ಮನವಿ ಮಾಡಿದ್ದಾರೆ.

