Loksabha polls 2024

ಬಿಜೆಪಿ ಎಂದಿಗೂ ಮೀಸಲಾತಿ ರದ್ದು ಮಾಡಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಗುಜರಾತ್: ಲೋಕಸಭೆ ಚುನಾವಣೆ ನಡುವೆಯೇ 35 ಅಧಿಕಾರಿಗಳ ಎತ್ತಂಗಡಿ
ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಯಲ್ಲಿರುವಂತೆಯೇ ಗುಜರಾತ್ ಸರ್ಕಾರ ಭಾನುವಾರ 35 ಭಾರತೀಯ ಪೊಲೀಸ್ ಸೇವಾ ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಿದೆ. ಇದರಿಂದಾಗಿ ಸೂರತ್ ಮತ್ತು ವಡೋದರದಂತಹ ಪ್ರಮುಖ ನಗರಗಳು ಹೊಸ ಪೊಲೀಸ್ ಆಯುಕ್ತರನ್ನು ಪಡೆದುಕೊಂಡಿವೆ.

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ, ಈಶಾನ್ಯ ದೆಹಲಿ ಕ್ಷೇತ್ರದಿಂದ ಕನ್ಹಯ್ಯಾ ಕುಮಾರ್ ಕಣಕ್ಕೆ
ಲೋಕಸಭೆ ಚುನಾವಣೆಗೆ 10 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದೆ. ಪಂಜಾಬಿನ ಜಲಂಧರ್-ಎಸ್‌ಸಿ ಲೋಕಸಭೆ ಸ್ಥಾನದಿಂದ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಅವರಿಗೆ ಟಿಕೆಟ್ ನೀಡಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ, ಕಂಗನಾ ವಿರುದ್ಧ ವಿಕ್ರಮಾದಿತ್ಯ ಸಿಂಗ್ ಕಣಕ್ಕೆ!
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 16 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ವಿಕ್ರಮಾದಿತ್ಯ ಸಿಂಗ್ ಅವರನ್ನು ಕಣಕ್ಕಿಳಿಸಿದೆ.

ವಿಜಯವಾಡ: ರೋಡ್ ಶೋ ವೇಳೆ ಕಲ್ಲು ಎಸೆತ, ಸಿಎಂ ಜಗನ್ ಮೋಹನ್ ರೆಡ್ಡಿಗೆ ಗಾಯ
ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರದ ಕಾವು ದಿನದಿಂದ ದಿನಕ್ಕೆ ಬಿರುಸು ಪಡೆಯುತ್ತಿರುವಂತೆಯೇ ಕೆಲವು ಕಡೆಗಳಲ್ಲಿ ಅಹಿತಕರ ಘಟನೆಗಳು ವರದಿಯಾಗುತ್ತಿವೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರ ಸಾಲ ಮನ್ನಾ- ರಾಹುಲ್ ಗಾಂಧಿ
ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಅಂಬೇಡ್ಕರ್ ಜನ್ಮದಿನದಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆ ಮಾಡಲಿದ್ದು, ಕಲ್ಯಾಣ ಮತ್ತು ಅಭಿವೃದ್ಧಿಯ ಯೋಜನೆಗಳ ಜೊತೆಗೆ 'ವಿಕಸಿತ ಭಾರತಕ್ಕಾಗಿ ಮಾರ್ಗಸೂಚಿಯನ್ನು ತನ್ನ ಚುನಾವಣಾ ಕಾರ್ಯಸೂಚಿಯಲ್ಲಿ ಪ್ರಮುಖವಾಗಿ ಗುರುತಿಸುವ ನಿರೀಕ್ಷೆಯಿದೆ.

Lok Sabha Polls 2024: ದಾವಣಗೆರೆ, ರಾಮನಗರದಲ್ಲಿ ಚುನಾವಣಾಧಿಕಾರಿಗಳ ಬೇಟೆ; 22 ಕೋಟಿ ಮೌಲ್ಯದ ಚಿನ್ನ, ವಜ್ರ ಜಪ್ತಿ
ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಕೇರಳ: ಟಿಪ್ಪು ಸುಲ್ತಾನ್ ನೊಂದಿಗೆ ನಂಟು, ಸುಲ್ತಾನ್ ಬತೇರಿ ಹೆಸರು ಬದಲಾವಣೆಗೆ ಬಿಜೆಪಿ ಮುಂದು...
ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಟಿಪ್ಪು ಸುಲ್ತಾನ್‌ಗೆ ಸಂಬಂಧಿಸಿದ ಸುಲ್ತಾನ್ ಬತೇರಿ ಪಟ್ಟಣದ ಹೆಸರನ್ನು ಬದಲಾಯಿಸಬೇಕು ಎಂದು ಬಿಜೆಪಿ ಗುರುವಾರ ಹೇಳಿದೆ.

