Loksabha polls 2024

ರಾಜೀವ್ ಚಂದ್ರಶೇಖರ್ ಅಫಿಡವಿಟ್ ವಿವರಗಳನ್ನು ಪರಿಶೀಲಿಸಲು ಸಿಬಿಡಿಟಿಗೆ ಚುನಾವಣಾ ಆಯೋಗ ಸೂಚನೆ
ಕೇಂದ್ರ ಸಚಿವ ಹಾಗೂ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಸಲ್ಲಿಸಿರುವ ಅಫಿಡವಿಟ್‌ನಲ್ಲಿನ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸುವಂತೆ ಕೇಂದ್ರ ನೇರ ತೆರಿಗೆಗಳ ಮಂಡಳಿಗೆ (ಸಿಬಿಡಿಟಿ) ಚುನಾವಣಾ ಆಯೋಗ ಮಂಗಳವಾರ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಆಹ್ವಾನ ತಿರಸ್ಕರಿಸಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶ್ರೀರಾಮನನ್ನು ಅವಮಾನಿಸಿವೆ: ಪ್ರಧಾನಿ ನರೇಂದ್ರ ಮೋದಿ
ಈ ವರ್ಷದ ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸದೆ ಇಂಡಿಯಾ ಮೈತ್ರಿಕೂಟದ ನಾಯಕರು ಶ್ರೀರಾಮನನ್ನು ಅವಮಾನಿಸಿದ್ದಾರೆ ಮತ್ತು ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದಲ್ಲಿ ಎಷ್ಟು ಮುಳುಗಿದೆ ಎಂದರೆ ಅವರು ಎಂದಿಗೂ ಅದರಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದರು.

ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ!
ಲೋಕಸಭೆ ಚುನಾವಣೆ ಹೊತ್ತಲ್ಲೆ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಕೇಂದ್ರದಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ರಾಜ್ಯದ ಸ್ಥಾನಮಾನ: ಸಿಎಂ ಸ್ಟಾಲಿನ್
ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಗೆ ರಾಜ್ಯದ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ.

ತಮಿಳುನಾಡು: ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ಎನ್ನಲಾದ ಮೂವರಿಂದ 4 ಕೋಟಿ ರೂ. ವಶ
ಫ್ಲೈಯಿಂಗ್ ಸ್ಕ್ವಾಡ್ ತಂಡವು ಭಾನುವಾರ ತಿರುನಲ್ವೇಲಿಗೆ ತೆರಳುತ್ತಿದ್ದ ಮೂವರಿಂದ 3.90 ಕೋಟಿ ರೂಪಾಯಿ ವಶಪಡಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಬಳಿಯಲ್ಲಿ ಆ ಹಣವನ್ನು ಸಾಗಿಸಲು ಯಾವುದೇ ಮಾನ್ಯ ದಾಖಲೆಗಳು ಇರಲಿಲ್ಲ.

ಲೋಕಸಭೆ ಚುನಾವಣೆ 2024: ಕರ್ನಾಟಕದ ಅಭ್ಯರ್ಥಿಗಳ ಆಸ್ತಿ-ಪಾಸ್ತಿ ಎಷ್ಟಿದೆ ಗೊತ್ತಾ?

ಲೋಕಸಭಾ ಚುನಾವಣೆ: ರಾಜೀವ್ ಚಂದ್ರಶೇಖರ್ ಒಟ್ಟು 28 ಕೋಟಿ ರೂ. ಆಸ್ತಿ ಘೋಷಣೆ
ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ನಾಯಕ ಹಾಗೂ ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಒಟ್ಟು 28 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ.

ಕಳೆದ 10 ವರ್ಷಗಳ ನಮ್ಮ ಸಾಧನೆ ಬರೀ ಟ್ರೈಲರ್: ಪ್ರಧಾನಿ ಮೋದಿ
ಕಳೆದ 10 ವರ್ಷಗಳಲ್ಲಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮಾಡಿರೋದು ಕೇವಲ 'ಟ್ರೇಲರ್' ಅಷ್ಟೇ, ಮೂರನೇ ಅವಧಿಗೆ ತಾವೂ ಪ್ರಧಾನಿ ಪ್ರಧಾನಿಯಾದರೆ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಂಸದೆ ಹೇಮಾಮಾಲಿನಿಯನ್ನು ನೆಕ್ಕಲು ಬಿಜೆಪಿ ಟಿಕೆಟ್: ನಾಲಿಗೆ ಹರಿಬಿಟ್ಟ ರಣದೀಪ್ ಸುರ್ಜೇವಾಲಾಗೆ ಸಂಕಷ್ಟ!
ಲೋಕಸಭೆ ಚುನಾವಣೆ 2024ರ ಮೊದಲ ಹಂತದ ಮತದಾನ ಮೇ 19ರಂದು ನಡೆಯುತ್ತಿದ್ದು ಅದಕ್ಕೂ ಮುನ್ನ ವಿವಾದಗಳ ಸರಮಾಲೆ ಸೃಷ್ಟಿಯಾಗುತ್ತಿದೆ. ಇತ್ತೀಚೆಗಷ್ಟೆ ನಟಿ ಕಂಗನಾ ರಣಾವತ್ ಬಗ್ಗೆ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತಾ ಸೆಕ್ಸಿ ಕಾಮೆಂಟ್ ಮಾಡಿ ಸಮಸ್ಯೆಗೆ ಸಿಲುಕಿದ್ದರು.

