Loksabha polls 2024

ಪ್ರಜಾಪ್ರಭುತ್ವ ಬೇಕಾದರೆ ಇಂಡಿಯಾ ಮೈತ್ರಿಕೂಟಕ್ಕೆ ಮತ ನೀಡಿ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಮನವಿ
ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ ನೆಲೆಸಬೇಕಾದರೆ ಇಂಡಿಯಾ ಮೈತ್ರಿಕೂಟಕ್ಕೆ ಮತ ಹಾಕುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಇಲ್ಲಿನ ಜನರಿಗೆ ಕರೆ ನೀಡಿದ್ದಾರೆ.

ಲೋಕಸಭಾ ಚುನಾವಣೆ: ಏಪ್ರಿಲ್ 5ಕ್ಕೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಏಪ್ರಿಲ್ 5 ರಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಉನ್ನತ ನಾಯಕರ ಸಮ್ಮುಖದಲ್ಲಿ ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿಮಾಚಲ ಪ್ರದೇಶ: ಮಂಡಿಯಲ್ಲಿ ರೋಡ್ ಶೋ ಮೂಲಕ ಕಂಗನಾ ರಣಾವತ್ ಪ್ರಚಾರ ಆರಂಭ!
ಬಾಲಿವುಡ್ ನಟಿ ಕಂಗನಾ ರಣಾವತ್ ಶುಕ್ರವಾರ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ತಮ್ಮ ಲೋಕಸಭಾ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದರು.

ಲೋಕಸಭಾ ಚುನಾವಣೆ: ಬಿಹಾರದಲ್ಲಿ 26 ಕ್ಷೇತ್ರಗಳಲ್ಲಿ RJD, 9 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ
ಬಿಹಾರದಲ್ಲಿ 40 ಲೋಕಸಭಾ ಕ್ಷೇತ್ರಗಳ ಪೈಕಿ 26ರಲ್ಲಿ ರಾಷ್ಟ್ರೀಯ ಜನತಾ ದಳ - ಆರ್ ಜೆಡಿ ಹಾಗೂ 9 ರಲ್ಲಿ ಕಾಂಗ್ರೆಸ್ ಪಕ್ಷ ಸ್ಪರ್ಧಿಸಲಿದೆ. ವಿರೋಧ ಪಕ್ಷಗಳ ಮೈತ್ರಿಕೂಟವಾದ ಮಹಾಘಟಬಂಧನ್ ಶುಕ್ರವಾರ ಸೀಟು ಹಂಚಿಕೆಯನ್ನು ಪ್ರಕಟಿಸಿದೆ. ಸಿಪಿಐ-ಎಂಎಲ್ 3 ಮತ್ತು ಸಿಪಿಐ ಮತ್ತು ಸಿಪಿಐ-ಎಂ ತಲಾ ಒಂದರಲ್ಲಿ ಸ್ಪರ್ಧಿಸಲಿವೆ.

ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್‌ಗೆ 1,700 ಕೋಟಿ ರೂ. ಹೊಸ ನೋಟಿಸ್!
ಹಿಂದಿನ ವರ್ಷಗಳ ತೆರಿಗೆ ರಿಟರ್ನ್ಸ್‌ನಲ್ಲಿನ ವ್ಯತ್ಯಾಸಗಳಿಗಾಗಿ ಆದಾಯ ತೆರಿಗೆ ಇಲಾಖೆಯು 1,700 ಕೋಟಿ ರೂಪಾಯಿ ಮೊತ್ತದ ಹೊಸ ನೋಟಿಸ್ ಅನ್ನು ಕಾಂಗ್ರೆಸ್‌ಗೆ ರವಾನಿಸಿದ್ದು, ಲೋಕಸಭೆ ಚುನಾವಣೆಗೆ ಮುನ್ನ ಹಣದ ಕೊರತೆಯಿರುವ ಪಕ್ಷಕ್ಕೆ ಮತ್ತೊಂದು ಹೊಡೆತ ನೀಡಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

'ಲೋಕ' ಚುನಾವಣೆಗೂ ಮುನ್ನ ಸಿಎಂ ಪಟ್ನಾಯಕ್‌ಗೆ ಶಾಕ್: ಆರು ಬಾರಿ ಗೆಲುವು ಸಾಧಿಸಿದ್ದ BJD ಸಂಸದ ಬಿಜೆಪಿಗೆ ಸೇರ್ಪಡೆ
ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಒಡಿಶಾದ ಆಡಳಿತಾರೂಢ ಬಿಜು ಜನತಾ ದಳ (BJD) ದೊಡ್ಡ ಹಿನ್ನಡೆಯಾಗಿದ್ದು ಕಟಕ್ ಸಂಸದ ಮತ್ತು ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಭರ್ತ್ರಿಹರಿ ಮಹತಾಬ್ ಇಂದು ಬಿಜೆಪಿ ಸೇರಿದ್ದಾರೆ.

ಸಿಎಂ ಏಕನಾಥ್ ಶಿಂಧೆ ಸಮ್ಮುಖದಲ್ಲಿ ನಟ ಗೋವಿಂದ ಶಿವಸೇನೆ ಸೇರ್ಪಡೆ!
ಬಾಲಿವುಡ್ ಹಿರಿಯ ನಟ ಗೋವಿಂದ ಶಿವಸೇನೆ ಸೇರಿದ್ದಾರೆ. ವಾಣಿಜ್ಯ ರಾಜಧಾನಿ ಮುಂಬೈಯಲ್ಲಿ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಗೋವಿಂದ, ವಾಯವ್ಯ ಮುಂಬೈ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ಗೋವಾ: ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿಯ ಮೊದಲ ಮಹಿಳಾ ಅಭ್ಯರ್ಥಿ ಪಲ್ಲವಿ ಡೆಂಪೊ!
ಗೋವಾದ ಬಿಜೆಪಿ ಚುನಾವಣಾ ಇತಿಹಾಸದಲ್ಲಿ ಡೆಂಪೊ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕಿ ಪಲ್ಲವಿ ಡೆಂಪೊ ಅವರು ಪಕ್ಷದ ಟಿಕೆಟ್‌ನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಮೊದಲ ಮಹಿಳಾ ಅಭ್ಯರ್ಥಿಯಾಗಿದ್ದಾರೆ.

ಲೋಕಸಭಾ ಚುನಾವಣೆ: ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬಿಜೆಪಿ
ಕೇರಳದ ಉಳಿದ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ರಾಜ್ಯ ಮುಖ್ಯಸ್ಥ ಕೆ ಸುರೇಂದ್ರನ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಯನಾಡ್ ಕ್ಷೇತ್ರದಲ್ಲಿ ಕಣಕ್ಕಿಳಿಸಿದೆ.

