Loksabha Polls

ಜೆಡಿಎಸ್-ಬಿಜೆಪಿ ಮುದ್ದಾಟ, 'ಸ್ವಾಭಿಮಾನಿ' ಸಂಸದೆಗೆ ಸಂಕಟ: ಸ್ಪರ್ಧಿಸಿದರೆ ಮಂಡ್ಯದಿಂದ ಮಾತ್ರ-ಸುಮಲತಾ ಹಠ!
ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಲೋಕ ಸಮರಕ್ಕೂ ಮೊದಲೇ 'ಇಂಡಿಯಾ' ಒಕ್ಕೂಟದ ಮೈತ್ರಿ ಠುಸ್; ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ ಘೋಷಣೆ
ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ 'ಒಳಮೀಸಲಾತಿ' ಅಸ್ತ್ರ: ಕೇಂದ್ರದ ಹೆಗಲಿಗೆ ಜವಾಬ್ದಾರಿ ಹೊರಿಸಿ ನುಣುಚಿಕೊಂಡ ರಾಜ್ಯ ಸರ್ಕಾರ!
ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಶಿಫಾರಸು ಮಾಡಿದೆ.

ಮತ್ತೊಮ್ಮೆ ಮೋದಿ: ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಚಾಲನೆ
2047ಕ್ಕೆ ವಿಕಸಿತ ಭಾರತದ ಸಂಕಲ್ಪವನ್ನು ನರೇಂದ್ರ ಮೋದಿಜೀ ಅವರು ಹೊಂದಿದ್ದಾರೆ. ಅದನ್ನು ಈಡೇರಿಸಲು ಮತ್ತೊಮ್ಮೆ ಮೋದಿ ಸಂಕಲ್ಪಕ್ಕೆ ಜನತೆ ಭಾರಿ ಬೆಂಬಲ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಒಮ್ಮತ: ಮೂಲಗಳು
ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದ ಮುಖ್ಯಸ್ಥರಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಶನಿವಾರ ಒಮ್ಮತ ಮೂಡಿದೆ ಎಂದು ಮೂಲಗಳು ತಿಳಿಸಿವೆ.

ಮೈಸೂರು: ಯತೀಂದ್ರ ಸ್ಪರ್ಧಿಸಿದರೆ ಸಿಎಂ ಪುತ್ರ- ಪತ್ರಕರ್ತನ ನಡುವೆ ಫೈಟ್; ಪ್ರತಾಪ್ ಸಿಂಹ
ಲೋಕಸಭೆ ಚುನಾವಣೆಯಲ್ಲಿ ನನಗೆ ಎದುರಾಳಿಯಾಗಿ ಯತೀಂದ್ರ ಸ್ಪರ್ಧಿಸಿದರೆ ಒಳ್ಳೆಯದು ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಸಚಿವರು ಸಿದ್ದಪಡಿಸಿರುವ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ ತೃಪ್ತಿ ತಂದಿಲ್ಲ: ಡಿಕೆ ಶಿವಕುಮಾರ್
ಮೇ ತಿಂಗಳ ಚುನಾವಣೆಗೆ ಮುನ್ನ ಪ್ರತಿ ಲೋಕಸಭಾ ಕ್ಷೇತ್ರದಿಂದ ಸಚಿವರು ಸಿದ್ಧಪಡಿಸಿರುವ ಸಂಭಾವ್ಯರ ಪಟ್ಟಿ ನನಗೆ ತೃಪ್ತಿ ತಂದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಅಗತ್ಯಬಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿ: ಕಳ್ಳಾಟವಾಡುತ್ತಿದ್ದ ಸಚಿವರಿಗೆ ಖಡಕ್ ವಾರ್ನಿಂಗ್!
ಅಗತ್ಯ ಬಿದ್ದರೆ ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿ ಎಂದು ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ.

ಸಿ.ಟಿ.ರವಿ, ಎಚ್.ಡಿ.ಕುಮಾರಸ್ವಾಮಿ ಭೇಟಿ: ಲೋಕಸಭೆ ಚುನಾವಣೆ ರಣತಂತ್ರ ಕುರಿತು ಚರ್ಚೆ
ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭಾನುವಾರ ಬಿಡದಿಯಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಭೇಟಿ ಮಾಡಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಹೇಗೆ ಒಗ್ಗೂಡಿ ಕೆಲಸ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಿದ್ದಾರೆ.

