ರಾಜ್ಯಯುವತಿ ಮೇಲೆ ಅತ್ಯಾಚಾರ, ಮತಾಂತರಕ್ಕೆ ಯತ್ನ: ಆರೋಪಿಗಳ ವಿರುದ್ಧ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ
ರಾಜ್ಯದಲ್ಲಿ ಮತ್ತೆ ಲವ್ ಜಿಹಾದ್ ಸದ್ದು ಮಾಡುತ್ತಿದ್ದು, ಯುವತಿ ಮೇಲೆ ಬರೋಬ್ಬರಿ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಮಾಡಿರುವ ಕಾಮುಕರು, ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಒತ್ತಡ ಹೇರುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಲುವಂತೆ ಸಂಸದೆ ಶೋಭಾ ಕರಂದ್ಲಾಜೆಯವರು ಆಗ್ರಹಿಸಿದ್ದಾರೆ.