Lucknow

ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾಗೆ ಮತ್ತೊಂದು ಹಿನ್ನಡೆ; ಮುರ್ಮು ಬೆಂಬಲಿಸಿದ ಅಖಿಲೇಶ್ ಯಾದವ್ ಮಿತ್ರ ಓಂ ಪ್ರಕಾಶ್ ರಾಜ್ಭರ್
ರಾಷ್ಟ್ರಪತಿ ಚುನಾವಣೆಯ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಪ್ರಚಾರಕ್ಕೆ ಶುಕ್ರವಾರ ಮತ್ತೊಂದು ಹಿನ್ನಡೆಯಾಗಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಮಿತ್ರ ಓಂ ಪ್ರಕಾಶ್ ರಾಜ್ ಭರ್ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.

ಲಖನೌ: ಮಗ ಸಾಕಿದ ಪಿಟ್‌ಬುಲ್ ನಾಯಿಯಿಂದಲೇ ತಾಯಿ ಸಾವು!
ತಾಯಿಯೊಬ್ಬರು ಮಗ ಸಾಕಿದ್ದ ಮುದ್ದಿನ ಪಿಟ್‌ಬುಲ್ ನಾಯಿಯಿಂದಲೇ ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆ ಉತ್ತರ ಪ್ರದೇಶದ ಲಖನೌದ ಕೈಸರ್‌ಬಾಗ್ ಪ್ರದೇಶದ ಬಂಗಾಳಿ ಟೋಲಾ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಚುನಾವಣಾಧಿಕಾರಿ ಮೇಲೆ ಹಲ್ಲೆ, ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಗೆ ಜೈಲು ಶಿಕ್ಷೆ
ಚುನಾವಣಾಧಿಕಾರಿಯೊಬ್ಬರ ಮೇಲಿನ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಬಾಲಿವುಡ್ ನಟ ರಾಜ್ ಬಬ್ಬರ್ ಗೆ ಇಲ್ಲಿನ ನ್ಯಾಯಾಲಯವೊಂದು ಎರಡು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ.

ಉತ್ತರ ಪ್ರದೇಶ: ವಿಧಾನ ಪರಿಷತ್ ಇತಿಹಾಸದಲ್ಲಿ ಇದೇ ಮೊದಲಿಗೆ ಕಾಂಗ್ರೆಸ್ ಸದಸ್ಯರ ಸಂಖ್ಯೆ ಶೂನ್ಯ!
ಕಳೆದ 135 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಉತ್ತರ ಪ್ರದೇಶ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಯಾವುದೇ ಪ್ರತಿನಿಧಿಗಳು ಇಲ್ಲದಂತಾಗಿದೆ. ಏಕೈಕ ಕಾಂಗ್ರೆಸ್ ಸದಸ್ಯರಾಗಿದ್ದ ದೀಪಕ್ ಸಿಂಗ್ ಅವರ ಅಧಿಕಾರ ಅವಧಿ ಮುಗಿದ ನಂತರ ಇಂದು ನಿವೃತ್ತರಾದರು.

ಕ್ರಿಮಿನಲ್‌ಗಳು, ಅಪರಾಧಿಗಳು ರಾಜಕೀಯ ಪ್ರವೇಶಿಸದಂತೆ ಕ್ರಮ ಕೈಗೊಳ್ಳಿ: ಸಂಸತ್, ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚನೆ
ಕ್ರಿಮಿನಲ್‌ಗಳು, ಅಪರಾಧಿಗಳು ರಾಜಕೀಯ ಪ್ರವೇಶಿಸದಂತೆ ಕ್ರಮ ಕೈಗೊಳ್ಳಿ ಎಂದು ಸಂಸತ್ ಮತ್ತು ಚುನಾವಣಾ ಆಯೋಗಕ್ಕೆ ಅಲಹಾಬಾದ್ ನ್ಯಾಯಾಲಯ ಸೂಚನೆ ನೀಡಿದೆ.

ಅಗ್ನಿಪಥ್ ಯೋಜನೆಗೆ ವಿರೋಧ: ಪ್ರಧಾನಿ ಮೋದಿಗೆ 420 ರೂ. ಚೆಕ್ ಕಳುಹಿಸಿದ ಎಎಪಿ!
ಅಗ್ನಿಪಥ್ ಯೋಜನೆ ವಿರೋಧಿಸಿ ಆಮ್ ಆದ್ಮಿ ಪಕ್ಷ ಭಾನುವಾರ ಲಖನೌನಲ್ಲಿ ಪ್ರತಿಭಟನೆ ನಡೆಸಿತು. ನೂತನ ಮಿಲಿಟರಿ ನೇಮಕಾತಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಯುವಕರನ್ನು ವಂಚಿಸಿದೆ ಎಂದು ಆರೋಪಿಸಿ, ಪ್ರಧಾನಿ ನರೇಂದ್ರ ಮೋದಿಗೆ 420 ರೂ. ಚೆಕ್ ಕಳುಹಿಸಿರುವುದಾಗಿ ಎಎಪಿ ಹೇಳಿದೆ.

ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಬೂಟಿನಿಂದ ಹೊಡೆದ ಪ್ರಾಂಶುಪಾಲ; ವಿಡಿಯೋ ವೈರಲ್
ಶಾಲೆಗೆ ತಡವಾಗಿ ಬಂದ ಶಿಕ್ಷಕಿಗೆ ಪ್ರಾಂಶುಪಾಲರೊಬ್ಬರು ಬೂಟಿನಿಂದ ಹೊಡೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಪ್ರವಾದಿ ಕುರಿತ ಹೇಳಿಕೆ ವಿವಾದ: ಉತ್ತರ ಪ್ರದೇಶದಲ್ಲಿನ ಹಿಂಸಾಚಾರಕ್ಕಾಗಿ 337 ಪ್ರತಿಭಟನಾಕಾರರ ಬಂಧನ
ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10 ರಂದು ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಂಟು ಜಿಲ್ಲೆಗಳಿಂದ ಇಲ್ಲಿಯವರೆಗೂ ಸುಮಾರು 337 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಲೋಪ, 8 ಪೊಲೀಸರ ಅಮಾನತು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪದ ನಂತರ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

