madal virupakshappa

ಕರ್ನಾಟಕ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೆ ಬಂಧನ ಭೀತಿ!
ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ್ದು, ಬಿಜೆಪಿ ಶಾಸಕರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

ನಿರೀಕ್ಷಣಾ ಜಾಮೀನಿನ ವಿರುದ್ಧ ಲೋಕಾಯುಕ್ತ ಅರ್ಜಿ; ಮಾಡಾಳ್ ವಿರೂಪಾಕ್ಷಪ್ಪ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿ ಕುರಿತು ಸೋಮವಾರ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ ಪೂರ್ಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತಕ್ಕೆ (ಕೆಎಸ್‌ಡಿಎಲ್) ಕಚ್ಚಾ ತೈಲ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಶುಕ್ರವಾರ ಕಾಯ್ದಿರಿಸಿದೆ.

ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಲೋಕಾಯುಕ್ತ ಸಿದ್ಧತೆ
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಮಾಡಾಳ್ ವಿರೂಪಾಕ್ಷಪ್ಪ ಮಧ್ಯಂತರ ಜಾಮೀನು ವಿರುದ್ಧ ಕರ್ನಾಟಕ ಲೋಕಾಯುಕ್ತ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಸ್ಟಡಿಗೆ ಕೋರಿ ಸುಪ್ರೀಂ ಕೋರ್ಟ್ ಗೆ ಲೋಕಾಯುಕ್ತ ಅರ್ಜಿ: ಇಂದು ವಿಚಾರಣೆ ಸಾಧ್ಯತೆ
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ತಡೆ ನೀಡುವಂತೆ ಲೋಕಾಯುಕ್ತ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮಾಡಾಳ್ ಪ್ರಶಾಂತ್ ಹಣದ ವಹಿವಾಟಿನ ಬಗ್ಗೆ ಹೆಚ್ಚಿನ ತನಿಖೆಗೆ ಲೋಕಾಯುಕ್ತ ತನಿಖಾಧಿಕಾರಿ ಶಿಫಾರಸು
ಮಾಡಾಳ್ ಪ್ರಶಾಂತ್, ಸುಂದರ್ ಮತ್ತು ಸಿದ್ದೇಶ್ ಅವರ ಅಕ್ರಮ ವಹಿವಾಟುಗಳು ಮತ್ತು ಬಿಜೆಪಿಯ ಚನ್ನಗಿರಿ ಶಾಸಕ ಹಾಗೂ ಕೆಎಸ್‌ಡಿಎಲ್‌ನ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಒಡೆತನದ ಬೇನಾಮಿ ಆಸ್ತಿಗಳ ಕುರಿತು ಸಮಗ್ರ ತನಿಖೆಗೆ ಲೋಕಾಯುಕ್ತ ತನಿಖಾಧಿಕಾರಿ ಶಿಫಾರಸು ಮಾಡಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಲೋಕಾಯುಕ್ತ ಚಿಂತನೆ
ಟೆಂಡರ್ ಮಂಜೂರು ಮಾಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜಾಮೀನು ನೀಡಿರುವುದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ಕರ್ನಾಟಕ ಲೋಕಾಯುಕ್ತ ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಸರ್ಕಾರದ ಸಹಾಯ ಇಲ್ಲದೆ ಮಾಡಾಳ್ ಗೆ ಒಂದೇ ದಿನದಲ್ಲಿ ಜಾಮೀನು ಸಿಗಲು ಹೇಗೆ ಸಾಧ್ಯ?: ಕಾಂಗ್ರೆಸ್
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ದಿನದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರುವ ವಿಚಾರ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್...

