Madhu Bangarappa

ತಜ್ಞರ ಜೊತೆ ಮಾತುಕತೆ ನಂತರ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು: ಸಚಿವ ಮಧು ಬಂಗಾರಪ್ಪ
ಶಿಕ್ಷಣ ಕ್ಷೇತ್ರದ ತಜ್ಞರೊಂದಿಗೆ ಚರ್ಚಿಸಿದ ನಂತರವೇ ಕರ್ನಾಟಕದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.

ಪರೀಕ್ಷೆ ಒತ್ತಡ ನಿವಾರಣೆ: ಕಾಲೇಜು ವಿದ್ಯಾರ್ಥಿಗಳಿಗೆ 80 ಅಂಕಗಳಿಗೆ ಎಕ್ಸಾಂ; ಮಧು ಬಂಗಾರಪ್ಪ
ವಿದ್ಯಾರ್ಥಿಗಳನ್ನು ಶೈಕ್ಷಣಿಕ ವರ್ಷಾರಂಭದಿಂದಲೇ ಓದಿನಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಮತ್ತು ಪರೀಕ್ಷಾ ಒತ್ತಡ ನಿವಾರಣೆ ಮಾಡುವ ನಿಟ್ಟಿನಲ್ಲಿ 2023-24ನೇ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೂ 20 ಆಂತರಿಕ ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

ಎನ್ಇಪಿ ಬದಲಿಗೆ ಕರ್ನಾಟಕ ತನ್ನದೇ ಶಿಕ್ಷಣ ನೀತಿಯನ್ನು ಜಾರಿಗೆ ತರಲಿದೆ: ಸಚಿವ ಮಧು ಬಂಗಾರಪ್ಪ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಅಳವಡಿಸಿಕೊಳ್ಳದಿರಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಬದಲಿಗೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ಜಾರಿಗೆ ತರಲಿದೆ ಎಂದು ಕರ್ನಾಟಕ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.

ಕೋರ್ಟ್ ಆದೇಶ ಬಂದ ಬಳಿಕವಷ್ಚೇ 13 ಸಾವಿರ ಪದವೀಧರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
ಕೋರ್ಟ್ ಆದೇಶ ಬಂದ ಕೂಡಲೇ 13 ಸಾವಿರ ಪದವೀಧರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಾಲೆ ಅಥವಾ ಸದನ.. ಸರಿಯಾದ ಸಮಯಕ್ಕೆ ಬರಬೇಕು: ಸಚಿವ ಮಧು ಬಂಗಾರಪ್ಪಗೆ ಸ್ಪೀಕರ್ ಖಾದರ್ ಸಲಹೆ, ಪ್ರದೀಪ್ ಈಶ್ವರ್ ಗೆ ತರಾಟೆ
ಶಾಲೆಯಾಗಲಿ ಅಥವಾ ಸದನವಾಗಲಿ.. ಎಲ್ಲರೂ ಸರಿಯಾದ ಸಮಯಕ್ಕೆ ಬರಬೇಕು ಎಂದು ಸ್ಪೀಕರ್ ಯುಟಿ ಖಾದರ್ ಸದಸ್ಯರಿಗೆ ಸಲಹೆ ನೀಡಿದ್ದಾರೆ.

ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್; ಲೋಕಸಭೆ ಟಿಕೆಟ್ ವರಿಷ್ಠರ ನಿರ್ಧಾರಕ್ಕೆ ಬಿಟ್ಟದ್ದು: ಮಧು ಬಂಗಾರಪ್ಪ
ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್ ಬಂದಿದ್ದಾರೆ. ಲೋಕಸಭೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಕರ್ನಾಟಕದಲ್ಲಿರುವ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಶಿಕ್ಷಣ ಸಚಿವರಿಗೆ ಪೋಷಕರ ಒತ್ತಾಯ
ರಾಜ್ಯದ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಪೋಷಕರ ತಂಡ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯಿಸಿದೆ.

ಪಠ್ಯಪುಸ್ತಕ ಪರಿಷ್ಕರಣೆ: 10 ದಿನಗಳೊಳಗೆ ಕಿರುಪುಸ್ತಕಗಳ ವಿತರಣೆ- ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕಗಳಲ್ಲಿನ ಬದಲಾವಣೆಗಳನ್ನು ಒಳಗೊಂಡಿರುವ ಪೂರಕ ಕಿರುಪುಸ್ತಕಗಳನ್ನು 10 ದಿನಗಳೊಳಗೆ ವಿತರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ರಚನೆಯಾಗದ ಪಠ್ಯಪುಸ್ತಕ ಸಮಿತಿ: ಹೊಸ ಪಠ್ಯಪುಸ್ತಕ ಮುಂದಿನ ವರ್ಷ ಪ್ರಕಟ ಸಾಧ್ಯತೆ
ಪಠ್ಯಪುಸ್ತಕ ಪರಿಷ್ಕರಣೆಗಳ ಬದಲಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕಗಳನ್ನು ಒಟ್ಟಾರೆಯಾಗಿ ರಾಜ್ಯ ಸರ್ಕಾರ ಬದಲಾಯಿಸುವ ಸಾಧ್ಯತೆಯಿದೆ.

