Madhu Bangarappa

ಪಠ್ಯಕ್ರಮದಲ್ಲಿ ಮಾಡಿರುವ ಬದಲಾವಣೆಗಳನ್ನು ಕಿರುಪುಸ್ತಕಗಳ ಮೂಲಕ ತಿಳಿಸಲಾಗುವುದು: ಮಧು ಬಂಗಾರಪ್ಪ
ಈ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕಗಳಲ್ಲಿ ಮಾಡಿರುವ ಬದಲಾವಣೆಗಳನ್ನು ಕಿರುಪುಸ್ತಕಗಳ ಮೂಲಕ ಶಿಕ್ಷಕರಿಗೆ ತಿಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.

ಈಗಾಗಲೇ ಪಠ್ಯಪುಸ್ತಕ ಪರಿಷ್ಕರಣೆ ಪ್ರಕ್ರಿಯೆ ಆರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ ಪಠ್ಯಕ್ರಮ ಪರಿಷ್ಕರಣೆ ಬಗ್ಗೆ ಸುಮ್ಮನಿರುವುದಿಲ್ಲ ಎಂಬ ಬಿಜೆಪಿಯ ಎಚ್ಚರಿಕೆ ನಡುವೆ, ಈಗಾಗಲೇ ಪಠ್ಯಪುಸ್ತಕಗಳ ಪರಿಷ್ಕರಣೆ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗಿದೆ ಎಂದು ಸರ್ಕಾರ ಗುರುವಾರ ಹೇಳಿದೆ

ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ
ಈ ವರ್ಷವೇ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಹೇಳಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಖಚಿತ, ಸಿಎಂ ನಿರ್ದೇಶನದಂತೆ ತಂಡ ರಚನೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ಸಿದ್ದವಿದ್ದು, ಮಕ್ಕಳ ಭವಿಷ್ಯ, ಮಕ್ಕಳ ಚಿಂತನೆ, ಮಕ್ಕಳ ಅವಶ್ಯಕತೆ ಇರುವ ವಿದ್ಯಾಭ್ಯಾಸ ಬಿಟ್ಟು ಬೇರೆ ಏನಾದರೂ ಪಠ್ಯದಲ್ಲಿ ಇದ್ದರೆ ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಷ್ಕರಣೆ ಮಾಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಹೇಳಿದ್ದಾರೆ.

ಮೇ 31 ರಿಂದ ಶಾಲೆಗಳು ಪ್ರಾರಂಭ; ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಸ್ವಾಗತ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ನಟ ಮಧು ಬಂಗಾರಪ್ಪಗೆ ಒಲಿದು ಬಂದ ಅದೃಷ್ಟ: 13 ವರ್ಷಗಳ ಬಳಿಕ ಸೊರಬ ಕ್ಷೇತ್ರಕ್ಕೆ ಸಚಿವ ಸ್ಥಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರು, ಮೊದಲ ಬಾರಿಗೆ ಬಾರಿಗೆ ಸಚಿವರಾಗಿದ್ದಾರೆ.

ಸಹೋದರರ ನಡುವೆ ಮತ್ತೆ ಪೈಪೋಟಿ: ಸೊರಬದಲ್ಲಿ ಮಾಜಿ ಸಿಎಂ ಎಸ್ ಬಂಗಾರಪ್ಪ ಪುತ್ರರ ಸೆಣಸಾಟ
ಪ್ರತಿಸ್ಪರ್ಧಿ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಸೇರಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರರು ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆಯ ರಾಜಕೀಯ ಪರಂಪರೆಯನ್ನು ಪಡೆದುಕೊಳ್ಳುವ ಹೋರಾಟದಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿದ್ದಾರೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕ
ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ (ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

'ಕಾಂಗ್ರೆಸ್ ಭವಿಷ್ಯ ರೂಪಿಸುತ್ತೆ, ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ರೆ ಉತ್ತಮ ಅವಕಾಶಗಳು ಸಿಗುತ್ತವೆ'
ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರಿ ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ. ಈಗ ಸರಿಯಾದ ವ್ಯಕ್ತಿ ಸರಿಯಾದ ಪಕ್ಷ ಸೇರಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

