Madhuswamy

ಉಪಚುನಾವಣೆ ಮೇಲೆ ಗಂಭೀರ ಪರಿಣಾಮ ಬೀರಲಿದೆಯೇ ಮಾಧುಸ್ವಾಮಿ ವಿವಾದ?
ಹೇಳಿಕೆ ಸಂಬಂಧ ಸಚಿವ ಮಾಧುಸ್ವಾಮಿ ವಿಷಾದ ವ್ಯಕ್ತಪಡಿಸಿದ್ದರೂ, ಸ್ವತಃ ಸಿಎಂ ಯಡಿಯೂರಪ್ಪ ಅವರೇ ಕ್ಷಮೆಯಾಚಿಸಿದರೂ, ಇದಾವುದಕ್ಕೂ ಕುರುಬ ಸಮುದಾಯದವರು ಒಪ್ಪದೆ, ತಮ್ಮ ಪ್ರತಿಭಟನೆ, ವಿರೋಧವನ್ನು ವ್ಯಕ್ತಪಡಿಸುತ್ತಿದ್ದು, ಈ ಎಲ್ಲಾ ಬೆಳವಣಿಗೆಗಳೂ ಉಪಚುನಾವಣೆ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮಾಧುಸ್ವಾಮಿ ವಿರುದ್ಧ ಸಿಡಿದೆದ್ದ ಕುರುಬ ಸಮುದಾಯ: ಇಂದು ರಾಜ್ಯದ ಎರಡು ಪಟ್ಟಣಗಳು ಬಂದ್
ಹೊಸದುರ್ಗದ ಕನಕ ಪೀಠದ ಶಾಖಾ ಮಠದ ಈಶ್ವರಾನಂದ ಶ್ರೀಗಳ ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಬುಧವಾರ ರಾಜ್ಯದ ಹಲವೆಡೆ ಕುರುಬ ಸಮುದಾಯದ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಕುರುಬ ಸಮುದಾಯದ ವಿರುದ್ಧ ಹೇಳಿಕೆ: ಮಾಧುಸ್ವಾಮಿ ಪರ ನಾನು ಕ್ಷಮೆ ಕೇಳುತ್ತೇನೆ: ಸಿಎಂ
ಸಚಿವ ಮಾಧುಸ್ವಾಮಿ ಪರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುರುಬ ಸಮುದಾಯದ ಕ್ಷಮೆ ಯಾಚಿಸಿದ್ದಾರೆ.

ಚಳಿಗಾಲ ಅಧಿವೇಶನ ಕುರಿತು ಕಾಂಗ್ರೆಸ್ ಟೀಕೆಗೆ ಯಾವುದೇ ಅರ್ಥವಿಲ್ಲ: ಸಚಿವ ಮಾಧುಸ್ವಾಮಿ
ಜನರ ಆಕ್ರೋಶ ಎದುರಿಸಬೇಕಾಗುತ್ತದೆ ಎಂಬ ಭಯದಿಂದ ಬೆಳಗಾವಿ ಬದಲು ಬೆಂಗಳೂರಿನಲ್ಲಿಯೇ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ ಎಂಬ ಕಾಂಗ್ರೆಸ್ ಟೀಕೆ ವಿರುದ್ಧ ಕಾನೂನು ಸಚಿವ ಮಾಧುಸ್ವಾಮಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಬಂದರೂ ತೊರೆಯುತ್ತೇನೆ- ಮಾಧುಸ್ವಾಮಿ
ವಾಕ್ ಚಾತುರ್ಯ ದಿಂದ ಹೆಸರಾಗಿರುವ ಚಿಕ್ಕನಾಯಕಹಳ್ಳಿ ಶಾಸಕ ಜೆ. ಸಿ. ಮಾಧುಸ್ವಾಮಿ ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ಪಡೆದಿರುವುದು ಕೆಲವರ ಹುಬ್ಬೇರಿಸಿದೆ. ಆದರೆ, ಮಾಧುಸ್ವಾಮಿ ಯಡಿಯೂರಪ್ಪ ಅವರ ನಿಷ್ಣಾತರಾಗಿದ್ದಾರೆ. ಈ ವಿಚಾರದಲ್ಲಿ ಪ್ರಶ್ನೆಯೇ ಇಲ್ಲ ಎಂದು ಅವರು ದಿ ನ್ಯೂ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.

'ಪ್ರಮಾಣ ವಚನ ಸ್ವೀಕರಿಸುವ ಭರದಲ್ಲಿ ನೂತನ ಸಚಿವ ಜೆ.ಸಿ ಮಾಧುಸ್ವಾಮಿ ಯಡವಟ್ಟು'
ಬಿ.ಎಸ್ ಯಡಿಯೂರಪ್ಪ ನೇತತ್ವದ ಬಿಜೆಪಿ ಸರ್ಕಾರದ ಸಂಪುಟ ರಚನೆಯಾಗಿದೆ, ಎಲ್ಲಾ 17 ಶಾಸಕರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನೀವು ನನಗೆ ಆರ್ಡರ್ ಮಾಡಬೇಡಿ: ಬಿಜೆಪಿ ಶಾಸಕ ಮಾಧುಸ್ವಾಮಿ ವಿರುದ್ಧ ಸ್ಪೀಕರ್ ಗರಂ
ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ವಿಳಂಬವಾಗುತ್ತಿದ್ದಂತೆ ಸದನದಲ್ಲಿ ಬಿಜೆಪಿ ಶಾಸಕ ಮಾಧುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು...

ಕುಮಾರಸ್ವಾಮಿ ದೇವೇಗೌಡರನ್ನು ಮನೆಯಿಂದ ಹೊರಹಾಕಿದ್ದರು, ಉಗ್ರಪ್ಪ ಬೆನ್ನು ಉಜ್ಜುತ್ತಿದ್ದರು: ಶಾಸಕ ಮಾಧುಸ್ವಾಮಿ
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ತಂದೆ ಮಾಜಿ ಪ್ರಧಾನಿ ದೇವೇಗೌಡರನ್ನೇ ಮನೆಯಿಂದ ಹೊರಹಾಕಿದ್ದರು ಎಂದು ಚಿಕ್ಕನಾಯಕನಹಳ್ಳಿ...

