ರಾಜ್ಯಸಿಎಂ ಬಿಎಸ್ ವೈ-ಫಡ್ನವೀಸ್ ಮಾತುಕತೆ: ಮಹದಾಯಿ, ಕೃಷ್ಣಾ ತೀರ್ಪಿನ ಗೆಜೆಟ್ ಅಧಿಸೂಚನೆಗೆ ಕೇಂದ್ರಕ್ಕೆ ಜಂಟಿ ಮನವಿ ಸಲ್ಲಿಕೆಗೆ ನಿರ್ಧಾರ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಮಹದಾಯಿ ಹಾಗೂ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಜಂಟಿ ಮನವಿ ಮಾಡಲು ತೀರ್ಮಾನಿಸಿದ್ದಾರೆ.