ರಾಜ್ಯಕೊರೋನಾ ಎಫೆಕ್ಟ್: ಮಹದೇಶ್ವರ ಬೆಟ್ಟದಲ್ಲಿ ಈ ಬಾರಿ ಯುಗಾದಿ ಜಾತ್ರೆ ಸರಳ ಆಚರಣೆ, ಸಹಕಾರಕ್ಕೆ ಸಚಿವ ಸುರೇಶ್ ಕುಮಾರ್ ಮನವಿ
ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಶ್ರೀಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದ ಈ ವರ್ಷದ ಯುಗಾದಿ ಹಬ್ಬ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಯಲಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳ ಭಕ್ತ ಸಮೂಹ ದೇವಾಲಯದ ಆಡಳಿತದೊಂದಿಗೆ ಸಹಕರಿಸಬೇಕೆಂದು ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.