ದೇಶಒಡಿಶಾದಲ್ಲಿ ಮಕರ ಮೇಳದ ವೇಳೆ ಕಾಲ್ತುಳಿತ; ಓರ್ವ ಸಾವು, 20 ಮಂದಿಗೆ ಗಾಯ
ಒಡಿಶಾದ ಕಟಕ್ ಜಿಲ್ಲೆಯಲ್ಲಿ ಶನಿವಾರ ನಡೆದ ಮಕರ ಮೇಳದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.