ರಾಜ್ಯಮಲ್ಲತ್ತಹಳ್ಳಿ ಕೆರೆಯಲ್ಲಿ ಶಿವನ ಪ್ರತಿಮೆ: ಸಚಿವ ಮುನಿರತ್ನ, ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್
ನಗರದ ಮಲ್ಲತ್ತಹಳ್ಳಿಯ ಕೆರೆಯ ದಂಡೆಯ ಮೇಲೆ 35 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡಿರುವುದಕ್ಕೆ ಸಂಬಂಧಿಸಿದಂತೆ ತೋಟಗಾರಿಕಾ ಸಚಿವ ವಿ ಮುನಿರತ್ನ ಸೇರಿದಂತೆ 8 ಮಂದಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು ಆದೇಶಿಸಿದೆ.