Mallikarjuna Kharge

ಒಬ್ಬ ವ್ಯಕ್ತಿಯನ್ನು ದೇವರನ್ನಾಗಿ ಮಾಡಿದರೆ ಅದು ಪ್ರಜಾಪ್ರಭುತ್ವವಾಗಲ್ಲ, ಸರ್ವಾಧಿಕಾರವಾಗುತ್ತದೆ: ಮಲ್ಲಿಕಾರ್ಜುನ ಖರ್ಗೆ
ಪ್ರಜಾಪ್ರಭುತ್ವದಲ್ಲಿ ಒಬ್ಬ ವ್ಯಕ್ತಿಯನ್ನು ದೇವರನ್ನಾಗಿ ಮಾಡಿದರೆ ಅದು ಪ್ರಜಾಪ್ರಭುತ್ವವಾಗುವುದಿಲ್ಲ, ಆದರೆ ಅದು ಸರ್ವಾಧಿಕಾರವಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಭಾನುವಾರ ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಮಂದ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು.

ಸಮಾಜವು ದ್ವೇಷದಿಂದ ವಿಭಜನೆಯಾಗುತ್ತಿದೆ, ಬೆಲೆ ಏರಿಕೆ-ನಿರುದ್ಯೋಗದಿಂದ ಜನ ತತ್ತರಿಸುತ್ತಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ: ಮಲ್ಲಿಕಾರ್ಜುನ ಖರ್ಗೆ
ಇಂದು ಡಿಸೆಂಬರ್ 28, ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ನ 138ನೇ ಸ್ಥಾಪನಾ ದಿನ. ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸಂಸ್ಥಾಪನಾ ದಿನ ಕಾರ್ಯಕ್ರಮ ನಡೆಯಿತು.

ದೇಶಕ್ಕಾಗಿ ಒಂದು ನಾಯಿಯನ್ನೂ ಕೂಡ ಕಳೆದುಕೊಂಡಿಲ್ಲ? ಹೇಳಿಕೆ: ಖರ್ಗೆ ವಿರುದ್ಧ ಬಿಜೆಪಿ ಕಿಡಿ, ಕ್ಷಮೆಗೆ ಆಗ್ರಹ, ಸಂಸತ್ತಿನಲ್ಲಿ ತೀವ್ರ ಗದ್ದಲ
ಕಾಂಗ್ರೆಸ್ ದೇಶಕ್ಕಾಗಿ ಕೆಲಸ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಸಹಾಯ ಮಾಡಿದೆ. ನಮ್ಮ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಬಿಜೆಪಿ ನಾಯಕರು ದೇಶಕ್ಕಾಗಿ ಒಂದು "ನಾಯಿಯನ್ನು ಸಹ ಕಳೆದುಕೊಂಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಸಂಸತ್ತಿನಲ್ಲಿ ಮಂಗಳವಾರ ತೀವ್ರ ಗದ್ದಲವನ್ನು ಸೃಷ್ಟಿಸಿದೆ.

'ಇಟಲಿ ಕಾಂಗ್ರೆಸ್ ಒಂದು ನಾಯಿಯೂ ಭಾರತ ಪರ ಬೊಗಳಿಲ್ಲ, ಅದು ಚೀನಾ ಮತ್ತು ಪಾಕಿಸ್ತಾನದ ಎಂಜಲು ತಿಂದು ಬಾಲ ಅಲ್ಲಾಡಿಸುತ್ತೆ'
ದೇಶಕ್ಕಾಗಿ ಬಿಜೆಪಿ ಮನೆಯ ಒಂದು ನಾಯಿಯೂ ಸತ್ತಿಲ್ಲ ಎಂದಿದ್ದ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.

ಕಲಬುರಗಿಯಲ್ಲಿಂದು 'ಕಲ್ಯಾಣ ಕ್ರಾಂತಿ' ಕಾಂಗ್ರೆಸ್ ಸಮಾವೇಶ; ಡಾ ಮಲ್ಲಿಕಾರ್ಜುನ ಖರ್ಗೆಗೆ ಅಭಿನಂದನೆ; ನಾಯಕರು ಭಾಗಿ
ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ನಾಯಕ, ಲೋಕಸಭೆ ಪ್ರತಿಪಕ್ಷ ನಾಯಕ ಡಾ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರೂರಿಗೆ ಆಗಮಿಸುತ್ತಿದ್ದಾರೆ.

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಕೆಲ ನಾಯಕರಿಂದ ಖರ್ಗೆಗೆ ಬಹಿರಂಗ ಬೆಂಬಲ- ಶಶಿ ತರೂರ್ ಅಸಮಾಧಾನ
ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಕೆಲವು ಮುಖಂಡರು ಬಹಿರಂಗವಾಗಿ ಬೆಂಬಲಿಸುತ್ತಿರುವುದಕ್ಕೆ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುಜರಾತ್ ಚುನಾವಣೆ ಹಿನ್ನೆಲೆ ಖರ್ಗೆ ನೇತೃತ್ವದಲ್ಲಿ ಚುನಾವಣೆ ಸಮಿತಿ ಸಭೆ; ಅಭ್ಯರ್ಥಿಗಳ ಪಟ್ಟಿ ಅಂತಿಮದ ಬಗ್ಗೆ ಚರ್ಚೆ
ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಕಾರ್ಯಕಾರಿ ಸಮಿತಿಗೆ ಪರ್ಯಾಯವಾಗಿ ಸಮಿತಿ ರಚಿಸಿದ್ದು, ಈ ನಡುವೆ ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯನ್ನೂ ನಡೆಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ: ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಗೊಂದಲ, ನಾಯಕರಿಗೆ ಚುನಾವಣೆ ಮೇಲೆ ಒಲವು
ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಬುಧವಾರ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಈ ಹೊತ್ತಿನಲ್ಲಿ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ(CWC) ಚುನಾವಣೆ ನಡೆಸಲಿದ್ದಾರೆಯೇ ಎಂಬುದು ಅತ್ಯಂತ ನಿರ್ಣಾಯಕ ಪ್ರಶ್ನೆಯಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗಾಗಿ ಅದ್ದೂರಿ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕದ ಮಲ್ಲಿಕಾರ್ಜುನ ಖರ್ಗೆ ಅವರಿಗಾಗಿ ಕರ್ನಾಟಕದಲ್ಲಿ ಅದ್ದೂರಿ ಸಮಾರಂಭ ಏರ್ಪಡಿಸಲು ಬಯಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

