ರಾಜ್ಯಕರಾವಳಿ, ಮಲೆನಾಡು ಭಾಗಗಳಲ್ಲಿ ಎಡೆಬಿಡದ ಮಳೆ: ರೆಡ್ ಅಲರ್ಟ್ ಘೋಷಣೆ, ಶಾಲಾ ಕಾಲೇಜುಗಳಿಗೆ ರಜೆ
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಮುಂದಿನ 24 ಗಂಟೆಗಳ ಕಾಲ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.