Mamata Banerjee

ರಾಷ್ಟ್ರ ಮಟ್ಟದಲ್ಲಿ ನಾವು INDIA ಬಣದ ಭಾಗ- ಮಮತಾ; 'ಅವಕಾಶವಾದಿ' ಎಂದ ಅಧೀರ್ ರಂಜನ್
ಟಿಎಂಸಿ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರೋಧಿ ಮೈತ್ರಿಕೂಟದ ಭಾಗವಾಗಿದ್ದು, ಮೈತ್ರಿ ಮುಂದುವರಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ.

INDIA ಮೈತ್ರಿಕೂಟ ಸರ್ಕಾರ ರಚನೆಗೆ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ
ವಿರೋಧ ಪಕ್ಷಗಳ ಮೈತ್ರಿಕೂಟ INDIA ಬಣ ಕೇಂದ್ರದಲ್ಲಿ ಸರ್ಕಾರ ರಚನೆಗೆ ಬಾಹ್ಯ ಬೆಂಬಲ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ.

ಬಂಗಾಳದ ಮಹಿಳೆಯರ ಸ್ವಾಭಿಮಾನ-ಘನತೆಯೊಂದಿಗೆ ಆಟವಾಡಬೇಡಿ: PM ಮೋದಿಗೆ ಮಮತಾ ಎಚ್ಚರಿಕೆ
ದೌರ್ಜನ್ಯಗಳ ಬಗ್ಗೆ ಸುಳ್ಳು ಹೇಳಿಕೆ ನೀಡುವ ಮೂಲಕ ರಾಜ್ಯದ ಮಹಿಳೆಯರ ಸ್ವಾಭಿಮಾನ ಮತ್ತು ಘನತೆಯೊಂದಿಗೆ ಆಟವಾಡಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ 'ಮೋದಿ ನೀತಿ ಸಂಹಿತೆ'ಯಾಗಿ ಮಾರ್ಪಟ್ಟಿದೆ: ಮಮತಾ
ಚುನಾವಣಾ ಪ್ರಚಾರದ ವೇಳೆ ಬಿಜೆಪಿ ನಾಯಕರು ದ್ವೇಷಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಆದರೂ ಚುನಾವಣಾ ಆಯೋಗ ಕಣ್ಣುಮುಚ್ಚಿ ಕುಳಿತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಗಾಯಗೊಂಡ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಿಜೆಪಿ ಪ್ರಚಾರಕ್ಕೆ ಸಹಾಯ ಮಾಡಲು ಚುನಾವಣಾ ಆಯೋಗ ಏಳು ಹಂತದ ಚುನಾವಣೆ ನಡೆಸುತ್ತಿದೆ: ಮಮತಾ
ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರದ ಸಂಪನ್ಮೂಲಗಳನ್ನು ಬಳಸಿಕೊಂಡು ವ್ಯಾಪಕ ಪ್ರಚಾರ ನಡೆಸಲು ಅನುವು ಮಾಡಿಕೊಡಲು ಕೇಂದ್ರ ಚುನಾವಣಾ ಆಯೋಗ ಏಳು ಹಂತದ ಚುನಾವಣೆ ನಡೆಸುತ್ತಿದೆ.

ಚುನಾವಣಾ ಆಯೋಗದ ಎದುರು 55 ದಿನಗಳ ಉಪವಾಸ ಸತ್ಯಾಗ್ರಹ: ಮಮತಾ ಬ್ಯಾನರ್ಜಿ ಎಚ್ಚರಿಕೆ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ಎದುರು 55 ದಿನಗಳ ಉಪವಾಸ ಸತ್ಯಾಗ್ರಹ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ದೀದಿ ಆಡಳಿತದ ಪಶ್ಚಿಮ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗ: ಅಮಿತ್ ಮಾಳವೀಯ ಟೀಕೆ
ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಪಶ್ಚಿಮ ಬಂಗಾಳ ಭಯೋತ್ಪಾದಕರಿಗೆ ಸುರಕ್ಷಿತ ಸ್ವರ್ಗವಾಗಿದೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಗಂಭೀರ ಆರೋಪ ಮಾಡಿದ್ದಾರೆ.

'ಮೋದಿ ಕಿ ಗ್ಯಾರಂಟಿ' ಎಂದರೆ ಚುನಾವಣೆ ಬಳಿಕ ಪ್ರತಿಪಕ್ಷಗಳ ನಾಯಕರ ಜೈಲಿಗಟ್ಟುವುದು: ಮಮತಾ ಬ್ಯಾನರ್ಜಿ
ಮೋದಿ ಕಿ ಗ್ಯಾರಂಟಿ' ಎಂದರೆ ಲೋಕಸಭಾ ಚುನಾವಣೆ ಪೂರ್ಣಗೊಂಡ ಬಳಿಕ ಪ್ರತಿಪಕ್ಷ ನಾಯಕರನ್ನು ಜೈಲಿಗೆ ಕಳುಹಿಸುವುದಾಗಿದೆ ಎಂದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ.

