Man

ಉತ್ತರ ಕನ್ನಡ: ಭಾರಿ ಮಳೆ, ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ!
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಬಳಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಓರ್ವ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಮರಗಳು ಧರೆಗುರುಳಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.

ಬೆಂಗಳೂರು: ಪತ್ನಿಯನ್ನು ಕೊಂದು, ಮಗಳನ್ನು ಕೊಲ್ಲಲು ಯತ್ನಿಸಿದ ವ್ಯಕ್ತಿ ಬಂಧನ
ತನ್ನ ಪತ್ನಿಯನ್ನು ಕೊಂದು 14 ವರ್ಷದ ಮಗಳನ್ನು ಕೊಲ್ಲಲು ಯತ್ನಿಸಿದ ವ್ಯಕ್ತಿಯೊಬ್ಬ ಘಟನೆಯ ಬಗ್ಗೆ ಸ್ವತಃ ಪೊಲೀಸರಿಗೆ ಮಾಹಿತಿ ನೀಡಿ ಶರಣಾಗಿದ್ದಾನೆ. ಬುಧವಾರ ಮುಂಜಾನೆ ಮತ್ತಿಕೆರೆಯಲ್ಲಿ ಈ ಘಟನೆ ನಡೆದಿದೆ.

ಅಕ್ರಮ ಸಂಬಂಧ ಹೊಂದಿದ್ದ ಪತಿ-ಮಹಿಳೆಯ ಬೆತ್ತಲೆ ಮೆರವಣಿಗೆ; ಪತ್ನಿ ಸೇರಿ ನಾಲ್ವರ ಬಂಧನ
ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ವಿವಾಹಿತ ಪುರುಷ ಮತ್ತು ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಮಗನಿಗೆ ಕಚ್ಚಿದ ನಾಯಿಯನ್ನು ಹೊಡೆದು ಕೊಂದ ವ್ಯಕ್ತಿ; ಪ್ರಾಣಿ ಪ್ರೀಯರ ಆಕ್ರೋಶ, ದೂರು ದಾಖಲು
ಮಗನಿಗೆ ಕಚ್ಚಿದ ನಾಯಿಯನ್ನು ವ್ಯಕ್ತಿಯೊಬ್ಬ ಕೊಂದು ಹಾಕಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.ಗ್ವಾಲಿಯರ್ ಜಿಲ್ಲೆಯ ಸಿಮರಿಯತಲ್ ಗ್ರಾಮದಲ್ಲಿ ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು ನಾಯಿಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ.

ಸಿಂಹವಿದ್ದ ಪ್ರದೇಶಕ್ಕೆ ನುಗ್ಗಿದ ವ್ಯಕ್ತಿ: ಮುಂದೇನಾಯ್ತು ಗೊತ್ತಾ? ವಿಡಿಯೋ ನೋಡಿ!
ಹೈದರಾಬಾದ್‌ನ ನೆಹರು ಝೂಲಾಜಿಕಲ್ ಪಾರ್ಕ್‌ನಲ್ಲಿ ಆಫ್ರಿಕನ್ ಸಿಂಹವಿದ್ದ ಆವರಣದಲ್ಲಿ ಅಲೆದಾಡುತ್ತಿದ್ದ 31 ವರ್ಷದ ವ್ಯಕ್ತಿಯನ್ನು ಮಂಗಳವಾರ ಮಧ್ಯಾಹ್ನ ಸಿಬ್ಬಂದಿ ರಕ್ಷಿಸಿದ್ದಾರೆ.

ಬೆಂಗಳೂರಿನಲ್ಲಿ ವರುಣನ ಅವಾಂತರ: ವಿದ್ಯುತ್ ತಗುಲಿ ವ್ಯಕ್ತಿ ಸಾವು
ನಿನ್ನೆ ಸುರಿದ ಭಾರೀ ಮಳೆಯಿಂದ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ವ್ಯಕ್ತಿ ಓರ್ವರು ಮೃತಪಟ್ಟಿರುವ ಘಟನೆ ನಗರದ ಕೆ.ಪಿ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸೌದಿ ಅರೇಬಿಯಾದಿಂದ ಕರ್ನಾಟಕ ತಲುಪಿದ ಮೃತದೇಹ: ಸಂಬಂಧಿಕರಿಂದ ಕೊಲೆ ಆರೋಪ
ಸೌದಿ ಅರೇಬಿಯಾದಲ್ಲಿ ಮೃತಪಟ್ಟಿದ್ದ ಕರ್ನಾಟಕದ 34 ವರ್ಷದ ವ್ಯಕ್ತಿಯ ಮೃತದೇಹ ಮೂರು ವಾರಗಳ ನಂತರ ತವರು ಗ್ರಾಮಕ್ಕೆ ಆಗಮಿಸಿದೆ.

ಉತ್ತರ ಕನ್ನಡ: 11 ವರ್ಷದ ಸೋದರ ಸಂಬಂಧಿ ಮೇಲೆ ಅತ್ಯಾಚಾರ; ವ್ಯಕ್ತಿ ಬಂಧನ
11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಬಂಧಿಸಲಾಗಿದೆ.

ಬೆಂಗಳೂರು: ಕಲ್ಲು ಎತ್ತಿ ಹಾಕಿ ಸ್ನೇಹಿತನ ಕೊಲೆ
ಕುಡಿದ ಮತ್ತಿನಲ್ಲಿ ಆರಂಭವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಡಿಜೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಶ್ರೀನಿವಾಸನಗರ ನಿವಾಸಿ ನಿತೇಶ್ ಮೃತ ದುರ್ದೈವಿ.

