ರಾಜ್ಯರಾಜ್ಯದಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ದಂಡ? ಈ ಬಗ್ಗೆ ಆರೋಗ್ಯ ಆಯುಕ್ತರು ನೀಡಿದ ಮಾಹಿತಿ ಇಲ್ಲಿದೆ...
ಕೋವಿಡ್ ಪ್ರಕರಣಗಳು, ವಿಶೇಷವಾಗಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಮೊದಲ ಹೆಜ್ಜೆಯಾಗಿ, ಆರೋಗ್ಯ ಸೌಧ ಮತ್ತು ಅದರ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲು ಆರೋಗ್ಯ ಆಯುಕ್ತ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ.