ರಾಜ್ಯಲೈಂಗಿಕ ಕಾರ್ಯಕರ್ತೆಯ ಹತ್ಯೆ: ಮಂಡ್ಯದ ವ್ಯಕ್ತಿಗೆ ಜೀವಾವಧಿ, ಅಲ್ಲದೇ 7 ವರ್ಷ ಕಠಿಣ ಜೈಲು ಶಿಕ್ಷೆ!
ದಶಕದ ಹಿಂದೆ ಮೈಸೂರಿನಲ್ಲಿ ಲೈಂಗಿಕ ಕಾರ್ಯಕರ್ತೆಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕೊಮ್ಮೇರಹಳ್ಳಿಯ ವ್ಯಕ್ತಿಯೊಬ್ಬನಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ಮತ್ತು 30,000 ರೂಪಾಯಿ ದಂಡ ವಿಧಿಸಿದೆ. ಅಲ್ಲದೇ ಕೊಲೆ ಮಾಡುವ ಮೊದಲು ಆಕೆಯನ್ನು ದರೋಡೆ ಮಾಡಿದ್ದಕ್ಕಾಗಿ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ.