ರಾಜ್ಯನಾಗರೀಕರ ಮೇಲಿನ ಇಂತಹ ಕ್ರೂರ ದಾಳಿಯನ್ನು ಎಂದೂ ನೋಡಿರಲಿಲ್ಲ: ಇಸ್ರೇಲ್ನ ಭಯಾನಕ ಸ್ಥಿತಿ ಬಿಚ್ಚಿಟ್ಟ ಕನ್ನಡಿಗರು
ಹಮಾಸ್ ಉಗ್ರರ ದಾಳಿಯಿಂದ ಇಸ್ರೇಲ್ ಮತ್ತು ಪ್ಯಾಲಿಸ್ಟೀನ್ ನಡುವೆ ಭೀಕರ ಯುದ್ಧವೇ ಶುರುವಾಗಿದೆ. ಪರಿಣಾಮ ಇಸ್ರೇಲ್ನಲ್ಲಿರುವ ಭಾರತೀಯರು ಮತ್ತು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಇಸ್ರೇಲ್ನಲ್ಲಿರುವ ಕನ್ನಡಿಗ ಲೆನಾರ್ಡ್ ಫೆರ್ನಾಂಡೀಸ್ ಎಂಬುವವರು ಇಸ್ರೇಲ್ನ ಭಯಾನಕ ಪರಿಸ್ಥಿತಿಯನ್ನು ವಿವರಿಸಿದ್ದಾರೆ.