Mangaluru blast

ಮಂಗಳೂರು ಸ್ಫೋಟ: ಶಾರಿಕ್ ಜೊತೆಗೆ ಕೇರಳದಲ್ಲಿ ಸಂಪರ್ಕದಲ್ಲಿದ್ದವರ ಪತ್ತೆಗೆ ತನಿಖೆ ಆರಂಭಿಸಿದ ಎನ್‌ಐಎ
ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಂಕಿತ ಭಯೋತ್ಪಾದಕ ಮೊಹಮ್ಮದ್ ಶಾರಿಕ್ ಜೊತೆಗಿನ ಕೇರಳದ ಸಂಪರ್ಕವನ್ನು ಪತ್ತೆಹಚ್ಚುವತ್ತ ಗಮನ ಹರಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಮಂಗಳೂರು ಸ್ಫೋಟ ಪ್ರಕರಣ: ಸ್ಯಾಟ್ ಲೈಟ್ ಫೋನ್ ಬಳಕೆಯಾಗಿಲ್ಲ- ಎಸ್ ಪಿ ಸ್ಪಷ್ಟನೆ; ಕದ್ರಿ ದೇವಾಲಯಕ್ಕೆ ಬಿಗಿ ಭದ್ರತೆ
ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್‌ಲೈಟ್ ಕರೆ ಹೋಗಿದೆ ಎಂಬ ವಿಚಾರವಾಗಿ ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಯಾವುದೇ ನಿರ್ದಿಷ್ಟ ಮಾಹಿತಿ ದೃಢಪಟ್ಟಿಲ್ಲ.

ಮಂಗಳೂರು ಸ್ಫೋಟ ಪ್ರಕರಣದಿಂದ ಎಚ್ಚೆತ್ತ ಆರ್‌ಡಬ್ಲ್ಯೂಎ: ನಿವಾಸಿಗಳ ಹಿನ್ನೆಲೆ ತಿಳಿದುಕೊಳ್ಳಲು ಮುಂದು!
ಮಂಗಳೂರಿನಲ್ಲಿ ಬಾಂಬ್ ಸ್ಫೋಟದ ಬಳಿಕ ಎಚ್ಚೆತ್ತುಕೊಂಡಿರುವ ಬೆಂಗಳೂರಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಸ್ಥಳೀಯರ, ವಿಶೇಷವಾಗಿ ಬಾಡಿಗೆದಾರರ ಹಿನ್ನೆಲೆ ಪರಿಶೀಲನೆ ನಡೆಸಲು ಕಠಿಣ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಮುಂದಾಗಿದೆ.

ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಶಾರೀಕ್ ಇಸಿಸ್ ನಿಂದ ತರಬೇತಿ ಪಡೆದಿದ್ದ: ಶೋಭಾ ಕರಂದ್ಲಾಜೆ
ಇತ್ತೀಚೆಗೆ ನಡೆದ ಮಂಗಳೂರು ಸ್ಫೋಟದ ಪ್ರಮುಖ ಶಂಕಿತ ಮೊಹಮ್ಮದ್ ಶಾರಿಕ್ ಇಸ್ಲಾಮಿಕ್ ಸ್ಟೇಟ್ ಆಫ್ ಇರಾನ್ ಆ್ಯಂಡ್ ಇರಾಕ್ ಉಗ್ರ ಸಂಘಟನೆಯಿಂದ ತರಬೇತಿ ಪಡೆದಿದ್ದ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಎನ್ಐಎ ತನಿಖೆಗೆ ಕೇಂದ್ರದಿಂದ ಅಧಿಕೃತ ಆದೇಶ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ರಾಜ್ಯದಲ್ಲಿ ತೀರ್ವ ಆಂತಕ ಮೂಡಿಸಿತ್ತು. ಇದೀಗ ತನಿಖೆಯನ್ನು ಎನ್‌ಐಎ ತನಿಖೆಗೆ ಕೇಂದ್ರ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮಂಗಳೂರು ಸ್ಫೋಟ ಪ್ರಕರಣ: ಎನ್ಐಎ ತನಿಖೆಗೆ ಸರ್ಕಾರ ಆದೇಶ, ಗೃಹ ಸಚಿವರಿಂದ ಅಧಿಕೃತ ಮಾಹಿತಿ
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ತನಿಖೆ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಗೃಹಸಚಿವ ಆರಗ ಜ್ಞಾನೇಂದ್ರ ಅಧಿಕೃತ ಮಾಹಿತಿ ನೀಡಿದ್ದಾರೆ.

ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ ಆಗಿತ್ತು: ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ 'ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್' ಸಂಘಟನೆ
ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಕದ್ರಿ ದೇವಸ್ಥಾನ ನಮ್ಮ ಗುರಿಯಾಗಿತ್ತು ಎಂದು ಹೇಳಿದೆ.

ಮಂಗಳೂರು ಸ್ಫೋಟ ಪ್ರಕರಣ: ರಾಜ್ಯದ ಮೇಲೆ ಶಾರೀಕ್ ಕೆಂಗಣ್ಣು, ತನ್ನೊಂದಿಗೆ ಮತ್ತಷ್ಟು ಸಹಚರರನ್ನು ಹೊಂದಿದ್ದನೆಯೇ?
ಮಂಗಳೂರಿನಲ್ಲಿ ನಡೆದ ಆಟೋರಿಕ್ಷಾ ಸ್ಫೋಟದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರಿಗೆ ಪ್ರಕರಣ ಸಂಬಂಧ ಸಾಕಷ್ಟು ಪ್ರಶ್ನೆ ಹಾಗೂ ಅನುಮಾನಗಳು ಮೂಡತೊಡಗಿದ್ದು, ಇವುಗಳಿಗೆ ಉತ್ತರ ಪಡೆದುಕೊಳ್ಳಲು ಪ್ರಕರಣದ ಪ್ರಮುಖ ಶಂಕಿತ ಆರೋಪಿ ಮೊಹಮ್ಮದ್ ಶಾರಿಕ್ ಚೇತರಿಸಿಕೊಳ್ಳಲು ಕಾಯುತ್ತಿದ್ದಾರೆ.

ಮಂಗಳೂರು ಸ್ಫೋಟ ಪ್ರಕರಣ: ಮೂಲಭೂತವಾದಿ ಯುವಕರಿಂದ ರಾಜ್ಯಕ್ಕೆ ಬೆದರಿಕೆ!
ಡಿಸೆಂಬರ್ 2020 ರಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಗಳ ಬಳಿಕ ಪತ್ತೆಯಾದ ಭಯೋತ್ಪಾದನೆ ಸಂಬಂಧಿತ ಪ್ರಕರಣಗಳಲ್ಲಿ ಬಂಧನಕ್ಕೊಳಗಾದ ಇತರೆ ಯುವಕರಲ್ಲಿ ಶಾರೀಕ್ ಕೂಡ ಒಬ್ಬನಾಗಿದ್ದಾನೆ.

