manifesto

ಎಸಿ ರೂಮ್ ನಲ್ಲಿ ಕುಳಿತು ಪ್ರಣಾಳಿಕೆ ಸಿದ್ಧಪಡಿಸಿಲ್ಲ, ಅಪಾರ ಸಂಖ್ಯೆಯ ಕಾರ್ಯಕರ್ತರ ಶ್ರಮ ಇದರಲ್ಲಿದೆ: ಜೆಪಿ ನಡ್ಡಾ
ಬಿಜೆಪಿ ಪ್ರಣಾಳಿಕೆಯನ್ನು ಎಸಿ ರೂಮ್ ನಲ್ಲಿ ಕುಳಿತು ಸಿದ್ಧಪಡಿಸಿಲ್ಲ, ರಾಜ್ಯದ ಮೂಲೆ ಮೂಲೆಗೆ ಭೇಟಿ ಅಭಿಪ್ರಾಯ ಸಂಗ್ರಹಿಸಿದ ಅಪಾರ ಸಂಖ್ಯೆಯ ಕಾರ್ಯಕರ್ತರ ಶ್ರಮ ಇದರಲ್ಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ.ನಡ್ಡಾ ಅವರು ಹೇಳಿದ್ದಾರೆ.

5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಪ್ರತಿದಿನ ಅರ್ಧ ಲೀಟರ್ ಹಾಲು, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್: ಬಿಜೆಪಿ ಪ್ರಣಾಳಿಕೆ ಬಿಡುಗಡೆ
ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆ ಇನ್ನೂ 5 ಕೆಜಿ ಸಿರಿಧಾನ್ಯ ವಿತರಣೆ ವಿತರಣೆ ಮಾಡುವುದಾಗಿ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.

ಇಂದಿರಾ ಕ್ಯಾಂಟೀನ್ ಮುಚ್ಚಿ, ಆಟಲ್ ಆಹಾರ ಕೇಂದ್ರ ಪ್ರಾರಂಭಿಸುವುದಾಗಿ ಬಿಜೆಪಿ ಹೇಳಿರುವುದು ಹಾಸ್ಯಾಸ್ಪದ: ಸಿದ್ದರಾಮಯ್ಯ
ಕಾಂಗ್ರೆಸ್ ಪಕ್ಷ ತನ್ನ ಅಧಿಕಾರವಧಿಯಲ್ಲಿ ರಾಜ್ಯದಾದ್ಯಂತ ಪ್ರಾರಂಭಿಸಿದ್ದ 600 ಇಂದಿರಾ ಕ್ಯಾಂಟೀನ್ ಗಳನ್ನು ರಾಜಕೀಯ ದ್ವೇಷಾಸೂಯೆಯಿಂದ ಮುಚ್ಚಿರುವ ಬಿಜೆಪಿ, ಈಗ ಅಟಲ್ ಆಹಾರ ಕೇಂದ್ರಗಳನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿರುವುದೇ ಹಾಸ್ಯಾಸ್ಪದ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ: ಬಿಜೆಪಿ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ
ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.

ರಾಜ್ಯ ವಿಧಾನಸಭಾ ಚುನಾವಣೆ 2023: 'ರಾಜ್ಯದ ಜನತೆಯಿಂದಲೇ, ಜನತೆಗಾಗಿ, ಜನತೆಗೋಸ್ಕರ' ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ.

ಕರ್ನಾಟಕ ಚುನಾವಣೆ: ನಾಳೆ ಜೆಪಿ ನಡ್ಡಾರಿಂದ ಬಿಜೆಪಿ ಪ್ರಣಾಳಿಕೆ ಬಿಡುಗಡೆ
ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ: 12 ಅಂಶಗಳ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್; ಮಹಿಳೆಯರು, ರೈತರಿಗೆ ಒತ್ತು
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಮಾಜಿ ಪ್ರಧಾನಿ ಹಾಗೂ ಹಿರಿಯ ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡರು ಶನಿವಾರ ಬೆಂಗಳೂರಿನಲ್ಲಿ 12 ಅಂಶಗಳ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಇದರಲ್ಲಿ ಪಕ್ಷವು ಮಹಿಳಾ ಸಬಲೀಕರಣ ಮತ್ತು ರೈತರ ಅಭಿವೃದ್ಧಿಗೆ ಒತ್ತು ನೀಡಿದೆ.

ಅಹಿಂದ ಯೋಜನೆ, ಉಚಿತ ವಿದ್ಯುತ್, ಭ್ರಷ್ಟಾಚಾರ ನಿರ್ಮೂಲನಕ್ಕೆ ಪ್ರಣಾಳಿಕೆಯಲ್ಲಿ ಒತ್ತು: ಜಿ.ಪರಮೇಶ್ವರ್
ಉದ್ಯೋಗ, ಭ್ರಷ್ಟಾಚಾರ ಮುಕ್ತ ಹಾಗೂ ಜನರ ಜ್ವಲಂತ ಸಮಸ್ಯೆ ನಿವಾರಣೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಒತ್ತು ನೀಡಲಾಗುವುದು ಎಂದು ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಹೇಳಿದರು.

ವಿಧಾನಸಭೆ ಚುನಾವಣೆ: ಬಿಜೆಪಿ ಬಿಡುಗಡೆ ಮಾಡಿದ ಮೊದಲ ಪ್ರಚಾರ ವಿಡಿಯೊ ಹೇಗಿದೆ ನೋಡಿ....
ಕರ್ನಾಟಕದಲ್ಲಿ ಈಗ ಬೇಸಿಗೆಯ ಬಿಸಿಲಿನಂತೆ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದು, ಮುಂದಿನ ತಿಂಗಳು ಮೇ 10ಕ್ಕೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಮತದಾನ ಪ್ರಕ್ರಿಯೆ ಸಾಗಲಿದೆ.

