Manipur Violence

ಮಣಿಪುರ ಮತ್ತೆ ಧಗಧಗ: ಮಹಿಳೆಯರ ಬೆತ್ತಲೆ ಮೆರವಣಿಗೆ, ಅತ್ಯಾಚಾರ, ಮೌನ ಮುರಿದ ಪ್ರಧಾನಿ ಮೋದಿ!
ರಾಜಧಾನಿ ಇಂಫಾಲದಿಂದ ಸುಮಾರು 35 ಕಿಮೀ ದೂರದಲ್ಲಿರುವ ಕಾಂಗ್ ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಜನರ ಗುಂಪೊಂದು ಮಹಿಳೆಯರನ್ನು ಥಳಿಸಿ ಬೆತ್ತಲೆಗೊಳಿಸಿ ಅವರನ್ನು ಮೆರವಣಿಗೆ ಮಾಡಿದ್ದು ಮಾತ್ರವಲ್ಲದೇ ಸಾಮೂಹಿಕ ಅತ್ಯಾಚಾರವೆಸಗಿದ್ದರು.

ಡಬಲ್ ಇಂಜಿನ್ ಸರ್ಕಾರವಿದ್ದರೂ, ಮಣಿಪುರ ಎರಡು ತಿಂಗಳಿನಿಂದ ಹೊತ್ತಿ ಉರಿಯುತ್ತಿದೆ: ಜೆಡಿಯು
ಮಣಿಪುರದಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದರೂ, ಎರಡು ತಿಂಗಳಿಗಿಂತ ಹೆಚ್ಚು ಕಾಲ ಈಶಾನ್ಯ ರಾಜ್ಯವು ಹೊತ್ತಿ ಉರಿಯುತ್ತಿದೆ ಎಂದು ಜೆಡಿಯು ಗುರುವಾರ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಮಣಿಪುರ ಕುರಿತು ಚರ್ಚೆಗೆ ಸರ್ಕಾರ ಸಿದ್ಧ; ವಿಪಕ್ಷಗಳ ಗದ್ದಲದ ನಡುವೆ ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ
ಮಣಿಪುರದ ಪರಿಸ್ಥಿತಿ ಕುರಿತು ಸದನದಲ್ಲಿ ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರ ಗದ್ದಲದ ನಡುವೆಯೇ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಗುರುವಾರ ದಿನದ ಮಟ್ಟಿಗೆ ಮುಂದೂಡಲಾಯಿತು.

ಮಣಿಪುರ ಹಿಂಸಾಚಾರ: 'ದುಷ್ಕರ್ಮಿಗಳ ನಡುವೆ ಪೊಲೀಸರು ಬಿಟ್ಟು ಹೋದರು'..; ಬೆತ್ತಲೆ ಮೆರವಣಿಗೆ, ಅತ್ಯಾಚಾರ ಸಂತ್ರಸ್ಥೆಯ ಹೇಳಿಕೆ
ಪೊಲೀಸರೇ ದುಷ್ಕರ್ಮಿಗಳ ನಡುವೆ ಬಿಟ್ಟು ಹೋದರು ಎಂದು ಮಣಿಪುರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಸಂತ್ರಸ್ಥೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ; ರಾಷ್ಟ್ರೀಯ ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ದೂರು
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ವಿಷಯದಲ್ಲಿ ಕೂಡಲೇ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

ಮಣಿಪುರ: ಇಬ್ಬರು ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಹಂಚಿಕೊಳ್ಳದಂತೆ ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರ ಸೂಚನೆ
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಕ್ಯಾಮರಾ ಮುಂದೆ ನಗ್ನಗೊಳಿಸಿ, ಪರೇಡ್ ಮಾಡಿಸಿದ ಬಳಿಕ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ. ಗುರುವಾರ ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಆದೇಶ ಹೊರಡಿಸಿರುವ ಸರ್ಕಾರ, ಈ ಆಕ್ಷೇಪಾರ್ಹ ವಿಡಿಯೋವನ್ನು ಹಂಚಿಕೊಳ್ಳದಂತೆ ಸೂಚನೆ ನೀಡಿದೆ ಎಂದು ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

ಮಣಿಪುರ: ಮಹಿಳೆ ಹತ್ಯೆಗೆ ಸಂಬಂಧಿಸಿದಂತೆ 9 ಮಂದಿ ಬಂಧನ, ನಾಗಾ ಪ್ರದೇಶಗಳಲ್ಲಿ 12 ಗಂಟೆಗಳ ಕಾಲ ಬಂದ್
ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಹತ್ಯೆಗೆ ಸಂಬಂಧಿಸಿದಂತೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡೇಟಿಗೆ ಮಹಿಳೆ ಸಾವು, 3 ಟ್ರಕ್ ಗಳಿಗೆ ಬೆಂಕಿಗಾಹುತಿ
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮತ್ತೆ ಗಲಭೆ ಭುಗಿಲೆದ್ದಿದ್ದು, ರಾಜಧಾನಿ ಪೂರ್ವ ಇಂಫಾಲ್ನಲ್ಲಿ (Imphal) ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮಣಿಪುರ ಹಿಂಸಾಚಾರ: ಪಶ್ಚಿಮ ಕಾಂಗ್‌ಪೊಕ್ಪಿಯಲ್ಲಿ ಪೊಲೀಸ್ ಸಿಬ್ಬಂದಿ ಹತ್ಯೆ, 10 ಮಂದಿಗೆ ಗಾಯ
ಮಣಿಪುರದ ಪಶ್ಚಿಮ ಕಾಂಗ್‌ಪೊಕ್ಪಿ ಪ್ರದೇಶದಲ್ಲಿ ರಾತ್ರೋರಾತ್ರಿ ನಡೆದ ಹಿಂಸಾತ್ಮಕ ಘರ್ಷಣೆ ನಂತರ ಸೋಮವಾರ ಒಬ್ಬ ಪೊಲೀಸ್ ಮೃತಪಟ್ಟು ಕನಿಷ್ಠ 10 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

