Manipur

ಪುಲ್ವಾಮಾ ದಾಳಿ ತನಿಖಾಧಿಕಾರಿ ರಾಕೇಶ್ ಬಲ್ವಾಲ್ ಜಮ್ಮು ಮತ್ತು ಕಾಶ್ಮೀರದಿಂದ ಮಣಿಪುರಕ್ಕೆ ವರ್ಗಾವಣೆ!
ದೇಶ

ಪುಲ್ವಾಮಾ ದಾಳಿ ತನಿಖಾಧಿಕಾರಿ ರಾಕೇಶ್ ಬಲ್ವಾಲ್ ಜಮ್ಮು ಮತ್ತು ಕಾಶ್ಮೀರದಿಂದ ಮಣಿಪುರಕ್ಕೆ ವರ್ಗಾವಣೆ!

ಈಶಾನ್ಯ ರಾಜ್ಯದಲ್ಲಿ ಹೊಸ ಹಿಂಸಾಚಾರ ಭುಗಿಲೆದ್ದಿರುವ ನಡುವೆಯೇ, ಕೇಂದ್ರ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ರಾಕೇಶ್ ಬಲ್ವಾಲ್ ಅವರನ್ನು ಜಮ್ಮು ಮತ್ತು ಕಾಶ್ಮೀರದಿಂದ ಮಣಿಪುರಕ್ಕೆ ವರ್ಗಾವಣೆ ಮಾಡಿದೆ. ರಾಕೇಶ್ ಅವರು 2021ರ ಕೊನೆಯಲ್ಲಿ ಶ್ರೀನಗರ ಎಸ್ಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ; ಇಂಫಾಲದಲ್ಲಿ ಡಿಸಿ ಕಚೇರಿ ಧ್ವಂಸ, ಎರಡು ವಾಹನಗಳಿಗೆ ಬೆಂಕಿ
ದೇಶ

ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆ; ಇಂಫಾಲದಲ್ಲಿ ಡಿಸಿ ಕಚೇರಿ ಧ್ವಂಸ, ಎರಡು ವಾಹನಗಳಿಗೆ ಬೆಂಕಿ

ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದು, ರಾಜಧಾನಿ ಇಂಫಾಲದಲ್ಲಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿವೆ. ಗುರುವಾರ ಮುಂಜಾನೆ ಇಂಫಾಲ್ ಪಶ್ಚಿಮದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದ್ದು, ಎರಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ; ಭಾರೀ ಪ್ರತಿಭಟನೆ, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತ
ದೇಶ

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ; ಭಾರೀ ಪ್ರತಿಭಟನೆ, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತ

ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಮಣಿಪುರದಲ್ಲಿ ಸೇನಾ ಯೋಧನನ್ನು ಅಪಹರಿಸಿ ಹತ್ಯೆ
ದೇಶ

ಮಣಿಪುರದಲ್ಲಿ ಸೇನಾ ಯೋಧನನ್ನು ಅಪಹರಿಸಿ ಹತ್ಯೆ

ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್‌ಥೆಕ್ ಗ್ರಾಮದಲ್ಲಿ ಭಾರತೀಯ ಸೇನೆಯ ಯೋಧನ ಶವ ಭಾನುವಾರ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರ: ಚುರಾಚಂದ್‌ಪುರದಲ್ಲಿ ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಹತ್ಯೆ
ದೇಶ

ಮಣಿಪುರ: ಚುರಾಚಂದ್‌ಪುರದಲ್ಲಿ ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿ ಹತ್ಯೆ

ಮಣಿಪುರದ ಚುರಾಚಂದ್‌ಪುರ ಜಿಲ್ಲೆಯ ಚಿಂಗ್‌ಫೀ ಬಂಕರ್ ನಂ.1ರಲ್ಲಿ ಬುಧವಾರ ಕರ್ತವ್ಯ ನಿರತ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ನಾವು INDIA, ಮಣಿಪುರದಲ್ಲಿ ಭಾರತದ ಕಲ್ಪನೆ ಮರುನಿರ್ಮಾಣ ಮಾಡುತ್ತೇವೆ": ಪ್ರಧಾನಿ ಮೋದಿಗೆ ರಾಹುಲ್ ತಿರುಗೇಟು
ದೇಶ

"ನಾವು INDIA, ಮಣಿಪುರದಲ್ಲಿ ಭಾರತದ ಕಲ್ಪನೆ ಮರುನಿರ್ಮಾಣ ಮಾಡುತ್ತೇವೆ": ಪ್ರಧಾನಿ ಮೋದಿಗೆ ರಾಹುಲ್ ತಿರುಗೇಟು

ನಮ್ಮನ್ನು ನೀವು ಹೇಗೆ ಬೇಕಾದರೂ ಕರೆಯಿರಿ.' ಆದರೆ 'ನಾವು INDIA' ಮತ್ತು 'ಮಣಿಪುರದಲ್ಲಿ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ' ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ...

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟಿನ ಮೂವರು ಬಲಿ!
ದೇಶ

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟಿನ ಮೂವರು ಬಲಿ!

ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಇಬ್ಬರು ಸಾವು, 45 ಮಂದಿಗೆ ಗಾಯ
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಇಬ್ಬರು ಸಾವು, 45 ಮಂದಿಗೆ ಗಾಯ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ತೆಂಗನೌಪಾಲ್ ಜಿಲ್ಲೆಯ ಪಲ್ಲೆಲ್‌ನಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೆಕ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 45 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು...

ಮಣಿಪುರ: ಹೈಕೋರ್ಟಿನಲ್ಲಿ ಕುಕಿ-ಝೋ ಶಿಕ್ಷಣ ತಜ್ಞರ ಪರ ವಕಾಲತ್ತು ವಹಿಸಿದ ವಕೀಲರ ಮನೆ ಮೇಲೆ ಗುಂಪು ದಾಳಿ, ಧ್ವಂಸ!
ದೇಶ

ಮಣಿಪುರ: ಹೈಕೋರ್ಟಿನಲ್ಲಿ ಕುಕಿ-ಝೋ ಶಿಕ್ಷಣ ತಜ್ಞರ ಪರ ವಕಾಲತ್ತು ವಹಿಸಿದ ವಕೀಲರ ಮನೆ ಮೇಲೆ ಗುಂಪು ದಾಳಿ, ಧ್ವಂಸ!

ಮಣಿಪುರ ಹೈಕೋರ್ಟಿನಲ್ಲಿ ಕುಕಿ-ಝೋ ಶಿಕ್ಷಣ ತಜ್ಞರನ್ನು ಪ್ರತಿನಿಧಿಸಿದ್ದಕ್ಕಾಗಿ ಇಂಫಾಲ್‌ನಲ್ಲಿ ಮೈಟಿ ವಕೀಲರೊಬ್ಬರ ಮನೆ ಮೇಲೆ ಗುಂಪೊಂದು ದಾಳಿ ನಡೆಸಿ, ಧ್ವಂಸಗೊಳಿಸಿದೆ. ಸೊರೈಶಮ್ ಚಿತ್ತರಂಜನ್ ಅವರ ಮನೆಯ ಮೇಲೆ ಶುಕ್ರವಾರ ದಾಳಿ ನಡೆದಿದೆ.