ರಾಜ್ಯಕಡಲ್ಕೊರೆತ ತಡೆ ಸಂಬಂಧಿಸಿದ ಯೋಜನೆಗಳಿಗೆ ಕೇಂದ್ರದ ನೆರವು ಅಗತ್ಯ: ಸಚಿವ ಮಂಕಾಳ ಎಸ್ ವೈದ್ಯ
ಕರ್ನಾಟಕದ 320 ಕಿಮೀ ಕರಾವಳಿ ರೇಖೆಯಲ್ಲಿ ವಿವಿಧ ಸ್ಥಳಗಳಲ್ಲಿ ಕಡಲ್ಕೊರೆತವನ್ನು ತಡೆಗಟ್ಟಲು ಶಾಶ್ವತ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ನೆರವು ನೀಡಬೇಕು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ರಾಜ್ಯ ಸಚಿವ ಮಂಕಾಳ ಎಸ್ ವೈದ್ಯ ಹೇಳಿದ್ದಾರೆ.