ದೇಶಮೀಸಲಾತಿ ಬೇಡಿಕೆ ಈಡೇರಿಕೆಗೆ 'ಮಹಾ' ಸರ್ಕಾರ ಒಪ್ಪಿಗೆ: ಪ್ರತಿಭಟನೆ ಹಿಂಪಡೆದ ಮರಾಠ ಕೋಟಾ ಕಾರ್ಯಕರ್ತ ಮನೋಜ್ ಜಾರಂಜ್
ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮರಾಠ ಸಮುದಾಯಗಳಿಗೆ ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಜ್ ಪಾಟೀಲ್ ಹಿಂಪಡೆದಿದ್ದು, ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ತಮ್ಮ ಮನವಿಯನ್ನು ಸ್ವೀಕರಿಸಿದೆ ಎಂದು ಹೇಳಿದ್ದಾರೆ.