Medical College

ರಾಜ್ಯದಲ್ಲಿ ವೈದ್ಯಕೀಯ ಕಾಲೇಜು ಆರಂಭ: ಶೇ.60 ಮಂದಿ ವಿದ್ಯಾರ್ಥಿಗಳು ತರಗತಿಗೆ ಹಾಜರ್
ಕೋವಿಡ್ ಲಾಕ್ ಡೌನ್ ನಂತರ ರಾಜ್ಯಾದ್ಯಂತ ವೈದ್ಯಕೀಯ ಕಾಲೇಜುಗಳು ಆರಂಭವಾಗಿದ್ದು ನಿನ್ನೆ ಮೊದಲ ದಿನ ಶೇಕಡಾ 60ರಷ್ಟು ಹಾಜರಾತಿ ಕಂಡುಬಂದಿದೆ.

ಡಿಸೆಂಬರ್ 1 ರಿಂದ ದಂತ, ವೈದ್ಯಕೀಯ ಕಾಲೇಜು ಆರಂಭಕ್ಕೆ ಸರ್ಕಾರ ನಿರ್ಧಾರ
ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ & ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಚಿಕ್ಕಮಗಳೂರಿನಲ್ಲಿ 30 ತಿಂಗಳಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆ: ಸಚಿವ ಡಾ.ಕೆ.ಸುಧಾಕರ್
ಕಾಫಿನಾಡು ಚಿಕ್ಕಮಗಳೂರಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮೆಡಿಕಲ್ ಕಾಲೇಜು ವಾಪಾಸ್ ಕನಕಪುರಕ್ಕೆ ಕೊಡಿಸದಿದ್ದರೆ ಏನು ಮಾಡುತ್ತೇನೆ ಎಂದು ನೋಡುತ್ತಿರಿ: ಡಿ ಕೆ ಶಿವಕುಮಾರ್
ವೈದ್ಯಕೀಯ ಕಾಲೇಜನ್ನು ತಮ್ಮ ತವರು ನೆಲ ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ವರ್ಗಾಯಿಸುವ ಸರ್ಕಾರದ ನಿರ್ಧಾರದಿಂದ ತೀವ್ರ ನೊಂದಿರುವ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ತಾವು ಈ ನಿರ್ಧಾರದ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ.

ನಾನು ಬಿಡುವುದಿಲ್ಲ; ಕನಕಪುರಕ್ಕೆ ಮತ್ತೆ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬಿಎಸ್‌ವೈಗೆ ಶಿವಕುಮಾರ್ ಪತ್ರ
ಮೈತ್ರಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಸರ್ಕಾರದ ಅದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ಜಿಲ್ಲೆಗಳಲ್ಲೇ ಇಲ್ಲ, ಇನ್ನು ತಾಲೂಕಿಗೊಂದು ಹೇಗೆ? ಡಿಕೆಶಿ ವಿರುದ್ಧ ಡಿಸಿಎಂ ಕಿಡಿ
ಹಲವು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳಿಲ್ಲ, ಇವರು ತಾಲೂಕಿಗೊಂದು ಕಾಲೇಜು ಹಾಕಿಸಿಕೊಂಡರೆ ಹೇಗೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಅವರು ಕಿಡಿ ಕಾರಿದ್ದಾರೆ.

ಈ ವರ್ಷ ವೈದ್ಯಕೀಯ ಕಾಲೇಜುಗಳಲ್ಲಿ 4,500ಕ್ಕೂ ಅಧಿಕ ಎಂಬಿಬಿಎಸ್ ಸೀಟುಗಳ ಹೆಚ್ಚಳ
ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಪದವಿ ಶಿಕ್ಷಣ ಕೋರ್ಸ್ ನ ಸಂಖ್ಯೆ...

ಕೋಲ್ಕತಾ ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: 250 ಮಂದಿ ರಕ್ಷಣೆ
ನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 250ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ...

ಮೀರತ್: ಸರ್ಕಾರಿ ವೈದ್ಯಕೀಯ ಕಾಲೇಜು ಕಾರ್ಯಕ್ರಮದಲ್ಲಿ ರಷ್ಯಾ ನರ್ತಕಿಯರ ಬೆಲ್ಲಿ ನೃತ್ಯ!
ಮೀರತ್ ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೋಮವಾರ ನಡೆದ ಹಳೆವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಷ್ಯನ್ ಬೆಲ್ಲಿ ನೃತ್ಯಗಾರ್ತಿಯರನ್ನು ಆಹ್ವಾನಿಸಿದ್ದಲ್ಲದೆ.......

