ರಾಜ್ಯವೈದ್ಯಕೀಯ ಸೀಟು ಕೊಡಿಸುವುದಾಗಿ 18 ಮಂದಿಗೆ 62 ಲಕ್ಷ ರೂ. ವಂಚನೆ; ಎಂಬಿಎ ಪದವೀಧರನ ಬಂಧನ
18 ವೈದ್ಯಕೀಯ ಸೀಟು ಆಕಾಂಕ್ಷಿಗಳಿಗೆ 62 ಲಕ್ಷ ರೂಪಾಯಿ ವಂಚನೆ ಮಾಡಿದ್ದ ಎಂಬಿಎ ಪದವೀಧರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಹೈದರಾಬಾದ್ ಮೂಲದ ಶರತ್ ಗೌಡ ಎಂದು ಗುರುತಿಸಲಾಗಿದ್ದು, ನ್ಯೂ ಬಿಇಎಲ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಆತ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.