ರಾಜ್ಯವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಪ್ರತಿಭಟನೆಗೆ ಕೈಜೋಡಿಸಿದ ಕರ್ನಾಟಕ ವೈದ್ಯರು
ಭಾರತೀಯ ವೈದ್ಯಕೀಯ ಸಂಘ(ಐಎಂಎ) ಕರೆ ನೀಡಿರುವ ದೇಶಾದ್ಯಂತ ಪ್ರತಿಭಟನೆಗೆ ರಾಜ್ಯದಲ್ಲಿಯೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನಿನ್ನೆ ರಾಜ್ಯದ 3 ಸಾವಿರಕ್ಕೂ ಹೆಚ್ಚು ವೈದ್ಯರು, ವೈದ್ಯಕೀಯ ಸಿಬ್ಬಂದಿ ಮೇಲೆ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಹಲ್ಲೆ ಖಂಡಿಸಿ, ಜೀವಕ್ಕೆ ರಕ್ಷಣೆ ಒದಗಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.