Medical Staff

BRIMS ವೈದ್ಯರಿಗೆ ಹಿಗ್ಗಾಮುಗ್ಗ ಥಳಿಸಿದ ಗುಂಪು; ಘಟನೆ ಖಂಡಿಸಿ ವೈದ್ಯಕೀಯ ಸಿಬ್ಬಂದಿ ಪ್ರತಿಭಟನೆ; Video
ಭಾಲ್ಕೆ ಅವರನ್ನು ರಕ್ಷಿಸಲು ಬಂದ ಇತರ ಸಿಬ್ಬಂದಿ, ಆ ಗ್ಯಾಂಗ್ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಅವರು ವೈದ್ಯರ ಮೇಲೆ ಹಲ್ಲೆಯನ್ನು ಮುಂದುವರಿಸಿದ್ದಾರೆ ಎನ್ನಲಾಗಿದೆ.

ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ, ಆಸ್ಪತ್ರೆಗೆ ಹಾನಿ ಮಾಡಿದರೆ 7 ವರ್ಷ ಜೈಲು: ತಿದ್ದುಪಡಿ ವಿಧೇಯಕಕ್ಕೆ ಉಭಯ ಸದನಗಳ ಒಪ್ಪಿಗೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಂಡಿಸಿದ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ಮಸೂದೆಯನ್ನು ಧ್ವನಿಮತದ ಮೂಲಕ ಸದನ ಅಂಗೀಕರಿಸಿದೆ.

ಜಯಲಲಿತಾ ಸಾವು ಪ್ರಕರಣ: ಶಶಿಕಲಾ ಹಾಗೂ ಇತರ ಮೂವರ ವಿರುದ್ಧ ತನಿಖೆಗೆ ಅರುಮುಘಸ್ವಾಮಿ ಆಯೋಗ ವರದಿ ಶಿಫಾರಸು
ತಮಿಳುನಾಡು ಮಾಜಿ ಸಿಎಂ ಜೆ.ಜಯಲಲಿತಾ ಸಾವು ಪ್ರಕರಣದಲ್ಲಿ ಶಶಿಕಲಾ ಹಾಗೂ ವೈದ್ಯಕೀಯ ಸಿಬ್ಬಂದಿ ತನಿಖೆಗೆ ನ್ಯಾ. ಆರ್ಮುಗಸ್ವಾಮಿ ವಿಚಾರಣಾ ಸಮಿತಿ ಆದೇಶಿಸಿದೆ.

ಕೊರೋನಾ 3ನೇ ಅಲೆ ಭೀತಿ; ವೈದ್ಯಕೀಯ ಸಿಬ್ಬಂದಿ ಸಂಖ್ಯೆ ಹೆಚ್ಚಿಸಲು ಹೂಡಿಕೆ ಮಾಡಿ: ಸರ್ಕಾರಕ್ಕೆ ತಜ್ಞರು
ಕೊರೋನಾ 2ನೇ ಅಲೆ ನಡುವಲ್ಲೇ ಇದೀಗ ರಾಜ್ಯದಲ್ಲಿ 3ನೇ ಅಲೆ ಭೀತಿ ಶುರುವಾಗಿದ್ದು, ಪರಿಸ್ಥಿತಿ ಎದುರಿಸಲು ಸಿದ್ಧರಾಗುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ನಡುವಲ್ಲೇ ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆ ಹೆಚ್ಚಿಸಲು ಹೆಚ್ಚಿನ ಹೂಡಿಕೆ ಮಾಡುವಂತೆ ತಜ್ಞರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಬಿಮ್ಸ್'ನಲ್ಲಿ ಸಿಲಿಂಡರ್ ಸ್ಫೋಟ: ವೈದ್ಯಕೀಯ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು
ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಳಗಾವಿ ಜಿಲ್ಲಾಸ್ಪತ್ರೆ (ಬಿಮ್ಸ್)ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಕೊರೋನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ನೀಡಿ: ಸರ್ಕಾರಕ್ಕೆ 'ಹೈ' ಸೂಚನೆ
ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೆ ಸೂಕ್ತ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ಮೊರಾದಾಬಾದ್: ವೈದ್ಯಕೀಯ ತಂಡದ ಮೇಲೆ ಹಲ್ಲೆ ನಡೆಸಿದ 17 ಆರೋಪಿಗಳು ಜೈಲಿಗೆ
ಮೊರಾದಾಬಾದ್ ನಲ್ಲಿ ಪೊಲೀಸರು ಹಾಗೂ ವೈದ್ಯಕೀಯ ತಂಡವೊಂದರ ಮೇಲೆ ಹಲ್ಲೆ ನಡೆಸಿದ ಗುಂಪಿನ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ವಿಶೇಷ ನ್ಯಾಯಾಲಯವೊಂದು ಇಂದು ಬೆಳಗ್ಗೆ ಜಾವ 3 ಗಂಟೆ ಸಮಯದಲ್ಲಿ ವಿಚಾರಣೆ ನಡೆಸಿ ಏಳು ಮಹಿಳೆಯರು ಸೇರಿದಂತೆ 17 ಮಂದಿ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೆಹಲಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮತ್ತಿಬ್ಬರು ವೈದ್ಯಕೀಯ ಸಿಬ್ಬಂದಿಗಳಲ್ಲಿ ಕೊರೋನಾ ಪತ್ತೆ!
ರಾಷ್ಟ್ರ ರಾಜಧಾನಿ ದೆಹಲಿಯ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮತ್ತಿಬ್ಬರು ವೈದ್ಯಕೀಯ ಸಿಬ್ಬಂದಿಗಳನ್ನು ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ.

ಕೋವಿಡ್-19: ವೈದ್ಯಕೀಯ ಸಿಬ್ಬಂದಿ ಸುರಕ್ಷತೆಗಾಗಿ ಧಾರವಾಡ ಐಐಟಿಯಿಂದ 3ಡಿ ಮುದ್ರಿತ ಫೇಸ್ ಶೀಲ್ಡ್ಸ್ ತಯಾರಿಕೆ
ಕೊರೋನಾವೈರಸ್ ರೋಗಿಗಳು ಹಾಗೂ ಶಂಕಿತರನ್ನು ಆರೈಕೆ ಮಾಡುವ ವೈದ್ಯಕೀಯ ಸಿಬ್ಬಂದಿ ಸುರಕ್ಷತೆಗಾಗಿ ಮುಖಕ್ಕೆ ಹಾಕಿಕೊಳ್ಳುವ ಫೇಸ್ ಶೀಲ್ಡ್ಸ್ ನೊಂದಿಗೆ ಧಾರಾವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆ ಮುಂದೆ ಬಂದಿದೆ. ಇದು 500 ಫೇಸ್ ಶಿಲ್ಡ್ ಗಳನ್ನು ತಯಾರಿಸಿದ್ದು, ಕಿಮ್ಸ್ ಆಸ್ಪತ್ರೆಗೆ ಹಸ್ತಾಂತರಿಸಿದೆ.

