meeting

ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗಿ
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡಿ ಬೆಟ್ಟದ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದು, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ದೇವಸ್ಥಾನದ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳ ಸುಧಾರಣೆಗೆ ನೀಲನಕ್ಷೆ ರೂಪಿಸಲಿದ್ದಾರೆ.

ಉಪನಗರ ರೈಲು ಯೋಜನೆ ವಿಳಂಬ: ಗುತ್ತಿಗೆ ಸಂಸ್ಥೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಎಂ.ಬಿ ಪಾಟೀಲ
ಇದುವರೆಗೂ ಕೇವಲ ಶೇ 28ರಷ್ಟು ಭೌತಿಕ ಹಾಗೂ ಶೇ 22ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ. ಇದೇ ವೇಗದಲ್ಲಿ ಹೋದರೆ ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸಲು ಸಾಧ್ಯ ಇಲ್ಲ. ಹೀಗಾಗಿ ವಾರ ಮತ್ತು ತಿಂಗಳ ಆಧಾರದಲ್ಲಿ ಪ್ರಗತಿಯನ್ನು ಕೆ-ರೈಡ್ ಅಧಿಕಾರಿಗಳು ಪರಿಶೀಲಿಸಬೇಕು.

ವೈದ್ಯರ ಬೇಡಿಕೆಗಳ ಅಧ್ಯಯನಕ್ಕೆ ಸಮಿತಿ ರಚನೆ!
ಕೊಲ್ಕತ್ತಾ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ವೈದ್ಯಕೀಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಚಿವರು ಮಂಗಳವಾರ ಸಭೆ ನಡೆಸಿದರು.

ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಗಾಗಿ ಆ.20ರಂದು ಸಭೆ: ಸಚಿವ ದಿನೇಶ್ ಗುಂಡೂರಾವ್
ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣ ಎಲ್ಲರಲ್ಲೂ ಆತಂಕ, ಗಾಬರಿಯನ್ನು ಮೂಡಿಸಿದೆ. ವೈದ್ಯರು, ಸಿಬ್ಬಂದಿಯಲ್ಲಿ ಮಹಿಳೆಯರೂ ಹೆಚ್ಚಾಗಿ ಕಾರ್ಯನಿರ್ವಹಿಸುತ್ತಾರೆ.

ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವುದು ರಾಜಕೀಯ ಷಡ್ಯಂತ್ರ, ಕಾನೂನು ಹೋರಾಟ ಮಾಡುತ್ತೇವೆ: ಸಿಎಂ ಪರವಹಿಸಿ ರಾಜ್ಯಪಾಲರ ವಿರುದ್ಧ ಸಚಿವರ ವಾಗ್ದಾಳಿ
ಗೃಹ ಸಚಿವ ಡಾ ಜಿ ಪರಮೇಶ್ವರ, ಯಾವ ರೀತಿಯಲ್ಲಿ ಗವರ್ನರ್ ಅನುಮತಿ ಕೊಟ್ಟಿದ್ದಾರೆಂದು ಗೊತ್ತಿಲ್ಲ. ಕಾನೂನು ಹೋರಾಟ ಮಾಡುತ್ತೇವೆ. ಕೇಂದ್ರದಿಂದ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಒತ್ತಡ ಇರುವುದು ಸ್ಪಷ್ಟವಾಗುತ್ತಿದೆ. ರಾಜ್ಯಪಾಲರ ಭವನ ರಾಜಕೀಯ ನಿವಾಸವಾಗುತ್ತಿದೆ.

ಪ್ರಾಸಿಕ್ಯೂಷನ್ ಗೆ ಅನುಮತಿ: ಮುಂದಿನ ಕಾನೂನು ಹೋರಾಟ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ, ಇಂದು ಸಂಜೆ ತುರ್ತು ಸಚಿವ ಸಂಪುಟ ಸಭೆ
ಸದ್ಯ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಅವರು ಮುಂದಿನ ಸೋಮವಾರ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ನಿಚ್ಛಳವಾಗಿದೆ.

ಮೈಸೂರು ಚಲೋಗೆ ಸೆಡ್ಡು: BSY-BYV ವಿರುದ್ಧ BJP ಬಂಡಾಯ ನಾಯಕರ ಸಭೆ; 'ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ'ಗೆ ಪ್ಲ್ಯಾನ್..!
ಬೆಳಗಾವಿಯ ಹೊರವಲಯದಲ್ಲಿ 12ಕ್ಕೂ ಹೆಚ್ಚು ಬಿಜೆಪಿಯ ಘಟಾನುಘಟಿ ನಾಯಕರು ಗೌಪ್ಯ ಸಭೆ ನಡೆಸಿ, ಹೊಸ ಸಮರಕ್ಕೆ ಸಿದ್ಧರಾಗಿದ್ದಾರೆ.

ಅಗತ್ಯಕ್ಕನುಗುಣವಾಗಿ ಯೋಜನೆ ರೂಪಿಸಿ ಕಾಲುವೆಗಳಿಗೆ ನೀರು ಹರಿಸಿ: ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಪ್ರತಿವರ್ಷದಂತೆ ರೇಣುಕಾ ಯಲ್ಲಮ್ಮದೇವಿಗೆ ಪೂಜೆ ಸಲ್ಲಿಸಿ ಸಾಂಕೇತಿಕವಾಗಿ ಇಂದು ಕಾಲುವೆಗಳಿಗೆ 200 ಕ್ಯೂಸೆಕ್ ನೀರು ಬಿಡುತ್ತೇವೆ. ಮುಂದಿನ ಊರುಗಳು ಮತ್ತು ಜಮೀನುಗಳಿಗೆ ನೀರು ನುಗ್ಗದಂತೆ ನೋಡಿಕೊಂಡು ನಾಳೆಯಿಂದ 8-10 ಸಾವಿರ ಕ್ಯೂಸೆಕ್ ನೀರು ಬಿಡಲಾಗುವುದು.

ಟೋಕಿಯೊ: ಪ್ರಾದೇಶಿಕ, ಜಾಗತಿಕ ಸಮಸ್ಯೆಗಳ ಕುರಿತು ಜೈಶಂಕರ್, ಬ್ಲಿಂಕನ್ ಚರ್ಚೆ
'ಇಂದು ಟೋಕಿಯೊದಲ್ಲಿ ಬ್ಲಿಂಕೆನ್ ಜೊತೆಗಿನ ಭೇಟಿ ಉತ್ತಮವಾಗಿತ್ತು. ನಮ್ಮ ದ್ವಿಪಕ್ಷೀಯ ಕಾರ್ಯಸೂಚಿಯು ಸ್ಥಿರವಾಗಿ ಮುಂದುವರಿಯುತ್ತದೆ. ಅಲ್ಲದೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿದರು'

