meeting

ಕೇಂದ್ರ ಸಚಿವರು, ರೈತ ಮುಖಂಡರ ನಡುವಿನ ಸಭೆ ವಿಫಲ: ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ ಮುಂದುವರಿಕೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ (SKM) ಕಿಸಾನ್ ಮಜ್ದೂರ್ ಮೋರ್ಚಾ ಮತ್ತಿತರ ಹಲವಾರು ರೈತ ಸಂಘಗಳು ಫೆಬ್ರವರಿ 13 ರಂದು ಸಂಸತ್ತಿನ ಹೊರಗೆ 'ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿವೆ.

ಹೆಚ್.ಡಿ ದೇವೇಗೌಡ ಭೇಟಿ ಮಾಡಿದ ಸಿಪಿ ಯೋಗೇಶ್ವರ್
ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಭಾನುವಾರ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.

ಹನುಮಧ್ವಜ ತೆರವು ವಿವಾದ: ಜಿಲ್ಲಾಧಿಕಾರಿ ಸಂಧಾನ ಸಭೆ ಯಶಸ್ವಿ, ನಾಳೆ ನಡೆಯಬೇಕಿದ್ದ ‘ಮಂಡ್ಯ ಬಂದ್ ವಾಪಸ್
ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಹೊತ್ತಿಕೊಂಡ ಕೆರೆಗೋಡು ಹನುಮ ಧ್ವಜ ತೆರವು ವಿವಾದ ಸದ್ಯಕ್ಕೆ ತಣ್ಣಗಾದಂತೆ ಕಾಣುತ್ತಿದೆ. ವಿವಾದ ಸಂಬಂಧ ಜಿಲ್ಲಾಧಿಕಾರಿಗಳು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ನಾಳೆ ನಡೆಯಬೇಕಿದ್ದ ಮಂಡ್ಯ ಬಂದ್'ನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ.

ಮಂಗನ ಕಾಯಿಲೆ: ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಚಿಕಿತ್ಸೆ ನೀಡಲು ಸಚಿವ ಗುಂಡೂರಾವ್ ಸೂಚನೆ
ಪಶ್ಚಿಮ ಘಟ್ಟದ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಿರಿಯ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಾತ್ಯತೀತರಾಗಿರಿ, ಸಂವಿಧಾನಕ್ಕೆ ಬದ್ಧರಾಗಿರಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಪೂರ್ತಿ ಬದ್ಧರಾಗಿರಬೇಕು: ಇಲ್ಲದಿದ್ದರೆ ಅಂತಹವರು ಅಧಿಕಾರದಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಎಚ್ಚರಿಕೆ ನೀಡಿದರು.

ಕುತೂಹಲ ಕೆರಳಿಸಿದ ಡಿಕೆ.ಶಿವಕುಮಾರ್-ಸೂರಜ್ ರೇವಣ್ಣ ಭೇಟಿ
ಎಚ್.ಡಿ. ರೇವಣ್ಣ ಅವರ ಪುತ್ರ, ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿದ್ದು, ಈ ಭೇಟಿ ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿ ಚಟುವಟಿಕೆ ಶುರು, ಅಭ್ಯರ್ಥಿ ಫೈನಲ್?
ಬಿಜೆಪಿ ವರಿಷ್ಠ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ನಾಯಕರು ಭಾನುವಾರ ಭೇಟಿ ಮಾಡಿದ್ದು, ಈ ಮೂಲಕ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯ ಅಧಿಕೃತ ಚಟುವಟಿಕೆ ಆರಂಭವಾದಂತಾಗಿದೆ.

ಲೋಕಸಭಾ ಚುನಾವಣೆ: ಜನವರಿ 19 ರಂದು ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ದೆಹಲಿ ಪ್ರವಾಸ ಬಳಿಕ ವಿದೇಶಕ್ಕೆ ಹಾರಿದ ಸಚಿವ ಸತೀಶ್ ಜಾರಕಿಹೊಳಿ
ಕಳೆದ 4 ದಿನಗಳಿಂದ ದೆಹಲಿ ಪ್ರವಾಸದಲ್ಲಿದ್ದ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

