meeting

ಲೋಕಸಭಾ ಚುನಾವಣೆ: ಪಕ್ಷದ ಅಭ್ಯರ್ಥಿ ಗೆಲ್ಲಿಸದ ಸಚಿವರ ತಲೆದಂಡ- ಡಾ. ಜಿ.ಪರಮೇಶ್ವರ್
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸದ ಸಚಿವರ ತಲೆದಂಡ ಆಗಲಿದೆ ಎಂಬ ಎಚ್ಚರಿಕೆಯನ್ನು ಹೈಕಮಾಂಡ್ ಕೊಟ್ಟಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ವಾರಕ್ಕೊಮ್ಮೆ ತಾಲೂಕು ಗ್ರಾಪಂ ಗಳಿಗೆ ಭೇಟಿ ನೀಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ
ಸರ್ಕಾರಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ವಾರಕ್ಕೊಮ್ಮೆ ಕಡ್ಡಾಯವಾಗಿ ತಾಲ್ಲೂಕು ಕೇಂದ್ರಗಳಿಗೆ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ...

ಪಿಎಂ ಕುಸುಮ್-ಸಿ ಯೋಜನೆ ಅನುಷ್ಠಾನ ಕುರಿತು ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯದ ರೈತರ ವಿದ್ಯುತ್ ಬೇಡಿಕೆಗಳನ್ನು ಪೂರೈಸಲು ಪಿಎಂ-ಕುಸುಮ್-ಸಿ...

ವಕ್ಫ್ ಆಸ್ತಿಗಳ ಒತ್ತುವರಿ: ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು
ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.

ಕೋವಿಡ್-19 ಉಲ್ಭಣ: ಸಕ್ರಿಯ ಪ್ರಕರಣಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿ: ಇಂದು ಸಿಎಂ ನೇತೃತ್ವದಲ್ಲಿ ಸಭೆ
ಕೊರೋನಾ ರೂಪಾಂತರಿ ಜೆಎನ್ 1 ಉಪತಳಿ ದೇಶದಲ್ಲಿ ಹೆಚ್ಚುತ್ತಿದ್ದು ಕರ್ನಾಟಕದಲ್ಲಿ ಕೂಡ ಉಲ್ಭಣಗೊಳ್ಳುತ್ತಿದೆ. ಕೊರೋನಾಕ್ಕೆ ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ. ಕೋವಿಡ್ ಆತಂಕ ತಲೆಧೋರಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಗುರುವಾರ ಮಹತ್ವದ ಸಭೆ ನಡೆಯಲಿದೆ.

ಕೊರೋನಾಗೆ ಬೆಂಗಳೂರಿನಲ್ಲಿ ವ್ಯಕ್ತಿ ಸಾವು; ದೇಶದಲ್ಲಿ 20 ಜೆಎನ್1 ಕೇಸ್ ದಾಖಲು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಕೊರೊನಾ ವೈರಸ್ನ ಜೆಎನ್ 1 (Coronavirus JN.1) ರೂಪಾಂತರಿ ಅತ್ಯಂತ ವೇಗವಾಗಿ ವ್ಯಾಪಿಸುತ್ತಿದ್ದು, ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ 64 ವರ್ಷದ ವೃದ್ಧರೊಬ್ಬರು ಐದು ದಿನಗಳ ಹಿಂದೆ ಮೃತಪಟ್ಟಿದ್ದಾರೆ.

ರಾಜ್ಯದ 'ಬರ' ಸಂಕಷ್ಟಕ್ಕೆ ಸಿಗಲಿದೆಯೇ ಕೇಂದ್ರದ ನೆರವು?: ಇಂದು ಪ್ರಧಾನಿ ಮೋದಿ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಕೊನೆಗೂ ಸಮಯ ನಿಗದಿಯಾಗಿದೆ. ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಳಗ್ಗೆ 11 ಗಂಟೆಗೆ ಭೇಟಿ ಮಾಡಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಲಿದ್ದಾರೆ.

ಕೋವಿಡ್ ಉಪತಳಿ JN.1 ಭೀತಿ: ನಾಳೆ ತಾಂತ್ರಿಕ ಸಲಹಾ ಸಮತಿ ಸಭೆ; ಕ್ರಿಸ್'ಮಸ್, ಹೊಸವರ್ಷ ಸಂಭ್ರಮಕ್ಕೆ ಬ್ರೇಕ್ ಸಾಧ್ಯತೆ
ನೆರೆಯ ಕೇರಳ ರಾಜ್ಯದಿಂದ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದು, ಸಭೆ ಬಳಿಕ ರಾಜ್ಯ ಸರ್ಕಾರ ಕ್ರಿಸ್'ಮಸ್, ಹೊಸ ವರ್ಷದ ಸಂಭ್ರಮಾಚರಣೆಗ ಕಟ್ಟುನಿಟ್ಟಿನ ಕ್ರಮ ಶಿಫಾರಸು ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ

ನಾಳೆ ಸಿಎಂ ಸಿದ್ದರಾಮಯ್ಯರಿಂದ ಪ್ರಧಾನಿ ಮೋದಿ ಭೇಟಿ?: ರಾಜ್ಯದ ಬರಕ್ಕೆ ಸಿಗಲಿದೆಯೇ ಕೇಂದ್ರದ ನೆರವು?
ನಾಳೆ ಮಂಗಳವಾರದಿಂದ ಮೂರು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಬಹುದು.ಈ ಬಗ್ಗೆ ಪ್ರಧಾನಿ ಸಚಿವಾಲಯ ಸಮಯ ನಿಗದಿ ಮಾಡಿದೆ ಎಂದು ತಿಳಿದುಬಂದಿದೆ.

