meeting

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಲಿಖಿತ ಅನುಮತಿ ಇಲ್ಲದೆ ಸಂತ್ರಸ್ತೆ ಭೇಟಿಗೆ ಅವಕಾಶವಿಲ್ಲ; ಹೈಕೋರ್ಟ್
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವುದರಿಂದ ಯಾವುದೇ ವ್ಯಕ್ತಿ, ಗುಂಪು, ಸಮೂಹ ಅಥವಾ ರಾಜಕೀಯ ಪಕ್ಷಗಳು ಆಕೆಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ...

ಲೋಕಸಭೆಯಲ್ಲಿ ಭಾರೀ ಭದ್ರತಾ ವೈಫಲ್ಯ: ಸಂಸದರ ಸಭೆ ಕರೆದ ಲೋಕಸಭಾಧ್ಯಕ್ಷ
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಭದ್ರತಾ ಲೋಪವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಈ ವಿಷಯದ ತಮ್ಮ ಆತಂಕ, ವಿಚಾರಗಳನ್ನು ತಿಳಿಸಲು ಇಂದು ಸಾಯಂಕಾಲ ಎಲ್ಲಾ ಪಕ್ಷಗಳ ಸಂಸದರ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

INDIA ಮೈತ್ರಿಕೂಟದ ಸಭೆ: ಬದಲಾಗುತ್ತಾ ಬಿಜೆಪಿ ವಿರುದ್ಧದ ಕಾರ್ಯತಂತ್ರ?
ಪಂಚರಾಜ್ಯಗಳ ಚುನಾವಣೆ ಬಳಿಕ INDIA ಮೈತ್ರಿಕೂಟಕ್ಕೆ ಸ್ಥಾನ ಹಂಚಿಕೆ ಪ್ರಮುಖ ಸವಾಲಾಗಿ ಪರಿಣಮಿಸಿದೆ. ಮೈತ್ರಿಕೂಟದ ಮುಂದಿರುವ ಸವಾಲುಗಳ ಬಗ್ಗೆ ಚರ್ಚೆ ನಡೆಸಲು ಡಿ.19 ರಂದು ಮೈತ್ರಿಕೂಟದ ಸಭೆ ನಡೆಯಲಿದೆ.

ರೈತರಿಗೆ ಮೊದಲ ಹಂತದ ಬರ ಪರಿಹಾರ: ಮುಂದಿನ ವಾರದೊಳಗೆ ವಿತರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳೆ ನಾಶದಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ರೂ.2,000 ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ರಾಜ್ಯಾಧ್ಯಕ್ಷ ಬದಲಾಗೋವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ!
ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವ ವರೆಗೆ ಬಿಜೆಪಿ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ತೆರಿಗೆ ಸಂಗ್ರಹ: 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಹಣದ ಕೊರತೆಯಾಗದಂತೆ ಎಚ್ಚರ ವಹಿಸಲು ಸೂಚನೆ
ರಾಜ್ಯದಲ್ಲಿ ತೆರಿಗೆ ಸಂಗ್ರಹಣಗೆ ಚುರುಕು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸರ್ಕಾರಕ್ಕೆ ಆದಾಯ ತಂದುಕೊಡುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಅರಣ್ಯ-ಕಂದಾಯ ಭೂಮಿ ಸಮಸ್ಯೆಗೆ ಜಂಟಿ ಸರ್ವೇಯೇ ಪರಿಹಾರ; ಶೀಘ್ರದಲ್ಲೇ ಆನ್ಲೈನ್ನಲ್ಲಿ ಡೀಮ್ಡ್ ಅರಣ್ಯ ನಕ್ಷೆ ಲಭ್ಯ: ಈಶ್ವರ ಖಂಡ್ರೆ
ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ವಿಚಾರದಲ್ಲಿ ಸಮಸ್ಯೆಗಳಿದ್ದು, ಇದನ್ನು ಜಂಟಿ ಸರ್ವೆಯ ಮೂಲಕ ಬಗೆಹರಿಸಬೇಕಾಗಿದೆ. ಡೀಮ್ಡ್ ಅರಣ್ಯ ಎಂದು ಘೋಷಿಸಲಾಗಿರುವ ಸರ್ವೆ ನಂಬರ್ ಮತ್ತು ನಕ್ಷೆಯನ್ನು ಸಾರ್ವಜನಿಕವಾಗಿ ಲಭ್ಯವಾಗುವಂತೆ ಮಾಡುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಎಂಎಸ್ಇಝಡ್ ಯೋಜನೆ: ನಿರ್ವಸಿತರಿಗೆ ಉದ್ಯೋಗ, ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ
ಎಂಎಸ್ಇಝಡ್ ಯೋಜನೆಗಾಗಿ ಭೂಮಿ ಕಳೆದುಕೊಂಡಿರುವ ನಿರ್ವಸಿತರಿಗೆ ಉದ್ಯೋಗ ನೀಡುವ ಮತ್ತು ಉದ್ಯೋಗದಲ್ಲಿ ಮುಂದುವರಿಸುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗುರುವಾರ ಮಹತ್ವದ ವರ್ಚುಯಲ್ ಸಭೆ ನಡೆಯಿತು.

ಪ್ರಗತಿ ಯೋಜನೆಗಳು ಕುಂಠಿತ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸಚಿವ ಪ್ರಿಯಾಂಕ್ ಖರ್ಗೆ
ಮೈಸೂರು ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಯೋಜನೆಗಳು ಕುಂಟುತ್ತಾ ಸಾಗಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಶುಕ್ರವಾರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

