meeting

ಡಿಕೆ ಶಿವಕುಮಾರ್ ಹೊರಗಿಟ್ಟು ಕೈ ನಾಯಕರ ಡಿನ್ನರ್ ಪಾಲಿಟಿಕ್ಸ್: ಪರಮೇಶ್ವರ್ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ!
ಸಿಎಂ ಸಿದ್ದರಾಮಯ್ಯ ಶುಕ್ರವಾರ ರಾತ್ರಿ ತನ್ನ ಆಪ್ತ ಸಚಿವರ ಜೊತೆ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗಿದೆ.

ಜಾತಿ ಗಣತಿ: ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಎಚ್ ಡಿಕೆ!
ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಬೆನ್ನಲ್ಲೇ, ರಾಜ್ಯದಲ್ಲಿಯೂ ಜಾತಿ ಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿಬಂದಿರುವಂತೆಯೇ, ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಟೆಕಾಂಡ್ ಸೇರಿ ಅನೇಕ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜೊತೆ ಎಂ.ಬಿ.ಪಾಟೀಲ ಚರ್ಚೆ, ಪ್ರಿಯಾಂಕ್ ಖರ್ಗೆ ಸಾಥ್
ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ ಸೆಳೆಯಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಎಲ್ಎಎಂ ರೀಸರ್ಚ್, ಲಿಯೋ ಲ್ಯಾಬ್ಸ್ ಮತ್ತು ಟೆಕಾಂಡ್ ಕಂಪನಿಗಳ ಉನ್ನತ ಮಟ್ಟದ ಪ್ರತಿನಿಧಿಗಳ ಜತೆ ವಿಸ್ತೃತ ಮಾತುಕತೆ ನಡೆಸಿದ್ದಾರೆ.

ರಾಜ್ಯದಲ್ಲಿ ಹೂಡಿಕೆ ಹೆಚ್ಚಳ: ಕಾನ್ಸುಲ್ ಜನರಲ್ ಜತೆ ಸಚಿವ ಎಂಬಿ ಪಾಟೀಲ ಚರ್ಚೆ
ಅಮೆರಿಕದ ಕಂಪನಿಗಳು ಕರ್ನಾಟಕದೊಂದಿಗೆ ಹೆಚ್ಚುಹೆಚ್ಚು ಆರ್ಥಿಕ ಸಹಭಾಗಿತ್ವ ಹೊಂದುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಇಲ್ಲಿನ ಭಾರತೀಯ ಕಾನ್ಸುಲ್ ಜನರಲ್ ಡಿ ಸಿ ಮಂಜುನಾಥ್ ಅವರೊಂದಿಗೆ ಭಾನುವಾರ ವಿಸ್ತೃತ ವಿಚಾರ ವಿನಿಮಯ ನಡೆಸಿದ್ದಾರೆ.

ರಾಜ್ಯದಲ್ಲಿ ವಹಿವಾಟು ಹೆಚ್ಚಳಕ್ಕೆ ಅಮೆರಿಕ ಒಲವು: 60 ಉದ್ಯಮಿಗಳೊಂದಿಗೆ ಸಚಿವ ಎಂ ಬಿ ಪಾಟೀಲ ಸಭೆ
ಅಕ್ಕ’ (ಅಮೆರಿಕ ಕನ್ನಡ ಕೂಟಗಳ ಆಗರ) ಸಂಘಟನೆ ಮತ್ತು ಯುಎಸ್- ಇಂಡಿಯಾ ಚೇಂಬರ್ ಆಫ್ ಕಾಮರ್ಸ್ ಜಂಟಿಯಾಗಿ ಆಯೋಜಿಸಿದ ಉದ್ಯಮಿಗಳ ದುಂಡು ಮೇಜಿನ ಸಭೆಯಲ್ಲಿ 60ಕ್ಕೂ ಹೆಚ್ಚು ಉದ್ಯಮಿಗಳು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ತಮ್ಮ ವಹಿವಾಟು ಮತ್ತು ನೆಲೆಯನ್ನು ವಿಸ್ತರಿಸಿಕೊಳ್ಳುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸಚಿವ ಎಂಬಿ ಪಾಟೀಲ ತಿಳಿಸಿದ್ದಾರೆ.

ಸಚಿವ ಈಶ್ವರ ಖಂಡ್ರೆ, ಡಿಕೆಶಿ ಭೇಟಿ: ಗೋದಾವರಿ, ಮೆಹಕರ್ ಸೇರಿ ಹಲವು ಯೋಜನೆಗಳ ಬಗ್ಗೆ ಚರ್ಚೆ
ಗೋದಾವರಿ ನದಿಯ ನೀರು ಬೀದರ್ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕದಲ್ಲಿ ಸಮರ್ಪಕವಾಗಿ ಬಳಕೆ ಆಗಬೇಕಿದ್ದು, ನಮ್ಮ ಪಾಲಿನ 23 ಟಿ.ಎಂ.ಸಿ ನೀರು ಉಪಯೋಗಿಸಿಕೊಳ್ಳಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಅಕ್ಟೋಬರ್ 2, 3 ರಂದು ಬೆಳಗಾವಿಯಲ್ಲಿ ಕುರುಬರ ಸಮಾವೇಶ
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕುರುಬ ಸಮುದಾಯದ ಮುಖಂಡರನ್ನು ಸೆಳೆಯಲು ಪಕ್ಷಗಳು ಕಸರತ್ತು ನಡೆಸುತ್ತಿವೆ. ಹಿಂದುಳಿದ ಈ ಸಮುದಾಯ ರಾಷ್ಟ್ರದಾದ್ಯಂತ ಸುಮಾರು 11 ಕೋಟಿ ಜನಸಂಖ್ಯೆಯನ್ನು ಹೊಂದಿದೆ.

ಜೆಡಿಎಸ್ ಫೀನಿಕ್ಸ್ ನಂತೆ ಪುಟಿದೇಳಲಿದೆ, ಪಕ್ಷ ಅಧಿಕಾರಕ್ಕೆ ಬರುವುದನ್ನು ನಾನು ಕಣ್ಣಾರೆ ನೋಡಲಿದ್ದೇನೆ: ಎಚ್.ಡಿ ದೇವೇಗೌಡ
ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲ ದಿನಗಳ ನಂತರ ಬುಧವಾರ ಜೆಡಿಎಸ್ನ ಪ್ರಮುಖ ನಾಯಕರ ಸಭೆ ನಡೆಸಿದ್ದಾರೆ. ಕಾವೇರಿ ನೀರಿನ ಸಮಸ್ಯೆ ಹಾಗೂ ಬರಗಾಲದ ಕುರಿತು ಚರ್ಚೆ ನಡೆಸಲಾಗಿದೆ.

ಕುತೂಹಲ ಮೂಡಿಸಿದ ಡಿ.ಕೆ ಶಿವಕುಮಾರ್- ತೇಜಸ್ವಿನಿ ಅನಂತ್ ಕುಮಾರ್ ಭೇಟಿ: ಮೀಟಿಂಗ್ ಹಿಂದಿದ್ಯಾ ಆಪರೇಷನ್?
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥರೂ ಆಗಿರುವ ತೇಜಸ್ವಿನಿ ಅನಂತಕುಮಾರ್ ಅವರು ಕುಮಾರಕೃಪಾ ಅತಿಥಿ ಗೃಹದಲ್ಲಿ ಸೋಮವಾರ ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು.

