meeting

ಲೋಕಸಭಾ ಚುನಾವಣೆ ಗೆಲುವು ಮುಖ್ಯ, ಕ್ಷೇತ್ರಗಳ ಅನುದಾನ ವಿಚಾರ ಆಮೇಲೆ ನೋಡೋಣ: ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಮೂರು ದಿನಗಳ ಕಾಲ ಸತತ ಸಭೆಗಳನ್ನು ನಡೆಸುತ್ತಿದ್ದು, ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯ ಶಮನಗೊಳಿಸಿ ಸಮನ್ವಯ ಮೂಡಿಸಲು ಪ್ರಯತ್ನಗಳ ನಡೆಸುತ್ತಿದ್ದಾರೆ.

ಪ್ರಮುಖ ಸಚಿವರೊಂದಿಗೆ ಮೋದಿ ಸಭೆ: ಸಂಸತ್ತಿನಲ್ಲಿ ಸರ್ಕಾರದ ಕಾರ್ಯತಂತ್ರ ಕುರಿತು ಚರ್ಚೆ
ಮಣಿಪುರ ಜನಾಂಗೀಯ ಹಿಂಸಾಚಾರ ವಿಚಾರವಾಗಿ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರಿಸಲಿದ್ದಾರೆ.

ಸಿದ್ದರಾಮಯ್ಯ ರಾಜ್ಯದ 224 ಶಾಸಕರಿಗೂ ಮುಖ್ಯಮಂತ್ರಿಗಳೇ ಅಥವಾ ಗ್ಯಾರಂಟೀ ಶಾಸಕರಿಗೆ ಮಾತ್ರವೇ??: ಬಿಜೆಪಿ
ಕ್ಷೇತ್ರಗಳಿಗೆ ಅನುದಾನ ಬಿಡುಗಡೆ, ಜಿಲ್ಲೆಗಳ ಉಸ್ತುವಾರಿ ಕೆಲಸಗಳು, ಶಾಸಕರ ಬೇಡಿಕೆಗಳು ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಮಂಗಳವಾರ ಕೂಡ ಕಾಂಗ್ರೆಸ್ ಶಾಸಕರ ಜೊತೆ ಸಭೆ ನಡೆಸಿದ್ದರು.

ಅಸಮಾಧಾನ ಶಮನಕ್ಕೆ ಅಖಾಡಕ್ಕಿಳಿದ ಸಿಎಂ: ಈ ವರ್ಷ ಹೆಚ್ಚಿನ ಅನುದಾನ ನಿರೀಕ್ಷಿಸಬೇಡಿ; ಶಾಸಕರಿಗೆ ಸೂಚನೆ
ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ವರ್ಷ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಬೇಡಿ ಎಂದು ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸೂಚಿಸಿದ್ದಾರೆ.

ಶಾಸಕರ ಅಸಮಾಧಾನ, ಸಿಟ್ಟು ಶಮನ ಮಾಡಲು ಸಿಎಂ, ಡಿಸಿಎಂ ಪ್ರಯತ್ನ: ನಾಳೆಯಿಂದ 3 ದಿನ ಜಿಲ್ಲಾವಾರು ಶಾಸಕರ ಸಭೆ
ಕಾಂಗ್ರೆಸ್ ಪಕ್ಷದಲ್ಲಿ ಇತ್ತೀಚೆಗೆ ಕೆಲವು ಶಾಸಕರು ಸಚಿವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಸುದ್ದಿಯಾಗಿತ್ತು. ನಂತರ ದೆಹಲಿಗೆ ಹೈಕಮಾಂಡ್ ಕರೆದು ಸಭೆ ನಡೆಸಿ ಚರ್ಚೆ ನಡೆಸಿದ್ದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅದಕ್ಕೂ ಮುನ್ನ ಶಾಸಕಾಂಗ ಸಭೆ ಕರೆದಿದ್ದರು.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ 20 ಸೀಟು ಗೆಲ್ಲುವುದು ನಮ್ಮ ಗುರಿ: ಹೈಕಮಾಂಡ್ ಮೀಟಿಂಗ್ ಬಳಿಕ ಸಿಎಂ, ಡಿಸಿಎಂ
ರಾಜಧಾನಿ ದೆಹಲಿಯಲ್ಲಿ ನಿನ್ನೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ, ಮಾಜಿ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಕರ್ನಾಟಕದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಂಪುಟ ಸಚಿವರ ಸಭೆ ನಡೆದಿದೆ.

ದೆಹಲಿಯಲ್ಲಿ ಇಂದು ಕಾಂಗ್ರೆಸ್ ಹೈಮಾಂಡ್ ಸಭೆ: ಶಾಸಕರು-ನಾಯಕರ ಅಸಮಾಧಾನ, ಲೋಕಸಭೆ ಚುನಾವಣೆ ಅಜೆಂಡಾ
ಇಂದು ಆಗಸ್ಟ್ 2 ಬುಧವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿಂದ ಕರ್ನಾಟಕಕ್ಕೆ ಸಂಬಂಧಿಸಿದಂತೆ ಹೈವೋಲ್ಟೇಜ್ ಸಭೆ ನಡೆಯಲಿದ್ದು, ಕರ್ನಾಟಕದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರು ಭಾಗವಹಿಸುತ್ತಿರುವುದು ಸಭೆಯ ಹೈಲೈಟ್ ಆಗಿದೆ.

ನಾಳೆ ಕಾಂಗ್ರೆಸ್ ಸಭೆ; ಸಚಿವರು, ಶಾಸಕರು-ಸಂಸದರು ಸೇರಿ 50 ನಾಯಕರು ದೆಹಲಿಗೆ ಪ್ರಯಾಣ: ಡಿ.ಕೆ ಶಿವಕುಮಾರ್
2024 ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ರಾಜ್ಯದ 50 ಕಾಂಗ್ರೆಸ್ ನಾಯಕರು ಮತ್ತು ಸಚಿವರು ಆಗಸ್ಟ್ 2 ರಂದು ನವದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಕೈ ಶಾಸಕರ ಒಳಬೇಗುದಿ: ಆಗಸ್ಟ್ 2 ರಂದು ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಹೈಕಮಾಂಡ್ ಸಭೆ
ಕೆಲ ದಿನಗಳಿಂದ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ಆಗಸ್ಟ್ 2 ರಂದು ನವದೆಹಲಿಯಲ್ಲಿ ಕರ್ನಾಟಕದ ಪಕ್ಷದ ನಾಯಕರೊಂದಿಗೆ ಎರಡು ಸಭೆಗಳನ್ನು ಕರೆದಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ

