meets

ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ ಗೆ ಪೂರ್ತಿ ಭೂಮಿ ಹಸ್ತಾಂತರ- ಸಚಿವ ಎಂ.ಬಿ.ಪಾಟೀಲ್
ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು.

ಸುಗ್ರೀವಾಜ್ಞೆ ವಿವಾದ: ಹೈದರಾಬಾದ್‌ನಲ್ಲಿ ಕೆಸಿಆರ್ ಭೇಟಿಯಾದ ಕೇಜ್ರಿವಾಲ್
ರಾಷ್ಟ್ರ ರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣ ಕುರಿತ ಕೇಂದ್ರದ ಸುಗ್ರೀವಾಜ್ಞೆ ವಿವಾದ ನಡುವೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೈದರಾಬಾದ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರನ್ನು ಭೇಟಿಯಾದರು.

ಮುಂಬೈ: ಉದ್ಧವ್ ಠಾಕ್ರೆ ಬಳಿಕ ಶರದ್ ಪವಾರ್ ಭೇಟಿಯಾದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾದರು.

ಸಚಿವ ಸ್ಥಾನ ಸಿಗದೆ ಮಧು ಬಂಗಾರಪ್ಪ ಅಸಮಾಧಾನ: ಶಿವಣ್ಣ ದಂಪತಿ ಭೇಟಿಯಾದ ಸುರ್ಜೇವಾಲ!
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಶಿವರಾಜ್ ಕುಮಾರ್ ದಂಪತಿ ಮನೆಗೆ ಭೇಟಿ ನೀಡಿದ್ದಾರೆ. ನಾಗವಾರದಲ್ಲಿರುವ ಸೆಂಚುರಿ ಸ್ಟಾರ್ ನಿವಾಸಕ್ಕೆ ತೆರಳಿರುವ ಸುರ್ಜೇವಾಲ, ಶಿವಣ್ಣನ ಜೊತೆಗೆ ಮಾತುಕತೆ ನಡೆಸಿದ್ದು, ಧನ್ಯವಾದ ಸಲ್ಲಿಸಿದ್ದಾರೆ.

ಎಸ್ ಎಂ ಕೃಷ್ಣ ನಂತರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಭೇಟಿಯಾದ ಡಿಕೆಶಿ!
ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದ ಹುಮ್ಮಸ್ಸಿನಲ್ಲಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪಕ್ಷ ಬೇಧ ಮರೆತು ಹಿರಿಯ ರಾಜಕಾರಣಿಗಳನ್ನು ಭೇಟಿ ಮಾಡುವ ಮೂಲಕ ಅವರ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ.

2024 ಲೋಕಸಭಾ ಚುನಾವಣೆ: ವಿಪಕ್ಷಗಳ ಒಕ್ಕೂಟ ರಚನೆಗೆ ಕಸರತ್ತು; ಖರ್ಗೆ, ರಾಹುಲ್ ಭೇಟಿಯಾದ ನಿತೀಶ್!
2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಪ್ರತಿಪಕ್ಷಗಳ ಒಕ್ಕೂಟ ರಚನೆಯ ಪ್ರಯತ್ನ ನಡೆಯುತ್ತಿರುವಂತೆಯೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ.

ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆಗೆ ಹಂಗಾಮಿ ಸಿಎಂ ಬೊಮ್ಮಾಯಿ ಅನೌಪಚಾರಿಕ ಮಾತುಕತೆ
ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು. ತಮ್ಮ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದ ಸಲ್ಲಿಸಿದರು.

2024 ಲೋಕಸಭಾ ಚುನಾವಣೆ: ವಿರೋಧ ಪಕ್ಷಗಳೊಂದಿಗೆ ಮೈತ್ರಿ ಇಲ್ಲ- ನವೀನ್ ಪಟ್ನಾಯಕ್
2024 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಳ್ಳಿ ಹಾಕಿದ್ದು, ಅವರ ಬಿಜು ಜನತಾ ದಳ (ಬಿಜೆಡಿ) ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.

ನಿತೀಶ್ ಮಿತ್ರ ಜಿತನ್ ರಾಮ್ ಮಾಂಝಿ ಅಮಿತ್ ಶಾ ಭೇಟಿ, ರಾಜಕೀಯ ಗುಸು ಗುಸು!
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಿತ್ರರಾದ ಜಿತನ್ ರಾಮ್ ಮಾಂಝಿ ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಿದ ನಂತರ ರಾಜಕೀಯ ವಲಯದಲ್ಲಿ ಗುಸು ಗುಸು ಕೇಳಿ ಬರುತ್ತಿದೆ.

