ದೇಶಶ್ರದ್ಧಾ ವಾಲ್ಕರ್ ಹತ್ಯೆ: ಆರೋಪಿ ಅಫ್ತಾಬ್ ಪೂನಾವಾಲಾ ಜಾಮೀನು ಅರ್ಜಿ ವಿಚಾರಣೆ ಡಿ.22ಕ್ಕೆ ಮುಂದೂಡಿಕೆ
ತನ್ನೊಂದಿಗೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಶ್ರದ್ಧಾ ವಾಲ್ಕರ್ ಅವರನ್ನು ಕೊಂದು, ಮೃತ ದೇಹವನ್ನು ತುಂಡುಗಳನ್ನಾಗಿ ಕತ್ತರಿಸಿದ್ದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾ, ತಾನು ವಕಾಲತ್ತಿಗೆ ಸಹಿ ಮಾಡಿದ್ದೇನೆ. ಆದರೆ, ಈ ಮೂಲಕ ತನ್ನ ಪರವಾಗಿ ಜಾಮೀನು ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿದಿರಲಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.