mekedatu project

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನ: KERS ನಿರ್ದೇಶಕರ ನೇತೃತ್ವದಲ್ಲಿ ತಂಡ ರಚಿಸಿ ಸರ್ಕಾರದ ಆದೇಶ
ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಕೆಲಸ ನಿರ್ವಹಿಸಲಿದೆ. ರಾಮನಗರದಲ್ಲೇ ಮೇಕೆದಾಟು ಯೋಜನೆ ಕಚೇರಿ ಸ್ಥಾಪಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮೇಕೆದಾಟು ಯೋಜನೆ: ಪ್ರಸಕ್ತ ದರಕ್ಕೆ ಪರಿಷ್ಕರಿಸಿ DPR ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ
ಹಿಂದೆ ಸಿದ್ಧಪಡಿಸಿದ್ದ ಡಿಪಿಆರ್ ಅನ್ನು 2019ರ ಜನವರಿಯಲ್ಲಿ ಕೇಂದ್ರ ಜಲ ಆಯೋಗಕ್ಕೆ (ಸಿಡಬ್ಲ್ಯುಸಿ) ಸಲ್ಲಿಸಲಾಗಿತ್ತು. ಆಡಳಿತಾತ್ಮಕ ಮತ್ತು ಕಾನೂನು ನಿರ್ಬಂಧಗಳಿಂದಾಗಿ ಸಿಡಬ್ಲ್ಯುಸಿ ಅದನ್ನು ಪರಿಶೀಲನೆಗೆ ತೆಗೆದುಕೊಂಡಿರಲಿಲ್ಲ.

ನಿಮ್ಮ ಪಾದಯಾತ್ರೆಯಿಂದಲೇ ಮೇಕೆದಾಟು ಯೋಜನೆಗೆ ಹಿನ್ನೆಡೆ: ಕಾಂಗ್ರೆಸ್'ಗೆ ಸಂಸದ ಬಸವರಾಜ ಬೊಮ್ಮಾಯಿ
ಮೇಕೆದಾಟು ಯೋಜನೆ ಬಹಳ ವರ್ಷದ ರಾಜ್ಯದ ಜನರ ಕನಸಾಗಿದೆ. ಇದು 1996ರಿಂದ ಆರಂಭವಾಗಿದ್ದು. ನಾನು ನೀರಾವರಿ ಸಚಿವ ಆಗಿದ್ದಾಗ ಬಹಳಷ್ಟು ಪ್ರದೇಶ ಮುಳುಗಡೆ ಆಗುತ್ತದೆ ಅಂತ ಕೇಳಿಬಂದಿತ್ತು.

ಮೇಕೆದಾಟು ಯೋಜನೆ: ಹೊಸ DPR ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: DCM ಡಿ.ಕೆ ಶಿವಕುಮಾರ್
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ತಿರಸ್ಕರಿಸಲ್ಪಟ್ಟಿದ್ದರಿಂದ, ಅದರ ಲೋಪದೋಷಗಳನ್ನು ಸರಿಪಡಿಸಿ, ಯೋಜನೆಯ ಸಂಪೂರ್ಣ ವಿವರಗಳೊಂದಿಗೆ, ಅರಣ್ಯ ಪ್ರದೇಶದ ಮುಳುಗಡೆಯ ಮಾಹಿತಿಯನ್ನೂ ಒಳಗೊಂಡ ಹೊಸ ಡಿಪಿಆರ್ ಅನ್ನು ಕಾನೂನು ಪ್ರಕಾರ ಸಲ್ಲಿಸಲಾಗುವುದು.

'ಕುಡಿದು ತೂರಾಡ್ತಾನೆ ಅಂತ ವಿರೋಧ ಪಕ್ಷದವರು ನನ್ನನ್ನ ಟೀಕೆ ಮಾಡಿದ್ರು; ನನಗೆ ಮಧ್ಯಾಹ್ನ ಕುಡಿಯುವ ಚಟ ಏನೂ ಇಲ್ಲ': ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ಅವರು ರಚಿಸಿರುವ ನೀರಿನ ಹೆಜ್ಜೆ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ನಾವು ವಿರೋಧ ಪಕ್ಷದಲ್ಲಿದ್ದಾಗ ಹೋರಾಟ ಮಾಡಿದ್ದೆವು, ಅಧಿಕಾರಕ್ಕೆ ಬಂದ ಮೇಲೂ ನಮ್ಮ ಹಕ್ಕಿಗಾಗಿ ಹೋರಾಟ ಮುಂದುವರಿಸಿದೆವು ಎಂದಿದ್ದಾರೆ.

ಬೆಂಗಳೂರಿನಲ್ಲಿ ಕಸ ಗುಡಿಸುವ ಯಂತ್ರಗಳಿಗೆ 613 ಕೋಟಿ ರೂ. ಬಾಡಿಗೆ; ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು ಹೀಗಿವೆ
ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಸಚಿವ ಸಂಪುಟ ಸಭೆ ಸ್ವಾಗತಿಸಿದೆ.

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಗೆಲುವು; ತಮಿಳು ನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು, ತಮಿಳುನಾಡಿನ ಮನವಿಯನ್ನು ತಪ್ಪಾಗಿ ಗ್ರಹಿಸಲಾಗಿದೆ, ರಾಜ್ಯವು ಆದೇಶವನ್ನು ಮೇಲ್ವಿಚಾರಣೆ ಮಾಡಲು ಅಧಿಕಾರ ಹೊಂದಿರುವ ತಜ್ಞರ ಸಮಿತಿಯನ್ನು ಸಂಪರ್ಕಿಸಬೇಕಾಗಿತ್ತು ಎಂದು ಹೇಳಿತು.

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ: ಸಿದ್ದರಾಮಯ್ಯ
ಕರ್ನಾಟಕ-ತಮಿಳುನಾಡು ಗಡಿಯಲ್ಲಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟುವಿನಲ್ಲಿ ಸಮತೋಲನ ಜಲಾಶಯ ನಿರ್ಮಿಸುವ ಬಗ್ಗೆ ಕರ್ನಾಟಕ ಸರ್ಕಾರವು ವರ್ಷಗಳಿಂದ ಚರ್ಚಿಸುತ್ತಿದೆ.

ಮೇಕೆದಾಟು ಯೋಜನೆ: ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭ
ಕರ್ನಾಟಕವು ಜೂನ್‌ನಲ್ಲಿ ತಮಿಳುನಾಡಿಗೆ 9 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಬೇಕಿತ್ತು. ಆದರೆ, ಈಗಾಗಲೇ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳೆರಡೂ ತುಂಬಿ ಹರಿಯುತ್ತಿರುವುದರಿಂದ ಈಗಲೇ 21 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡಿದೆ.

