mekedatu project

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಸಿದ್ಧತೆ: ಫೆ.1ಕ್ಕೆ ಸಿಡಬ್ಲ್ಯುಎಂಎ ಪೂರ್ವಭಾವಿ ಸಭೆ
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಈ ನಡುವಲ್ಲೇ ಫೆಬ್ರವರಿ 1 ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪೂರ್ವಭಾವಿ ಸಭೆ ಕರೆದಿದೆ ಎಂದು ತಿಳಿದುಬಂದಿದೆ.

ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರ ಸರ್ಕಾರಕ್ಕೆ ದೇವೇಗೌಡ ಮನವಿ
ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ಒತ್ತಾಯಿಸಿದರು.

ರಾಜ್ಯಗಳಲ್ಲಿ ಪಕ್ಷಗಳ ಮಧ್ಯೆ ಸಹಮತ ಕೊರತೆಯಿಂದ ಮೇಕೆದಾಟು ಯೋಜನೆ ವಿಳಂಬ: ಗಜೇಂದ್ರ ಸಿಂಗ್ ಶೇಖಾವತ್
ಕರ್ನಾಟಕದಲ್ಲಿ ನೀರಾವರಿ ಯೋಜನೆಗಳು ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರವು ಅಡ್ಡಿಪಡಿಸುತ್ತಿದೆ ಮತ್ತು ಸಹಕಾರ ನೀಡುತ್ತಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಕ್ಕೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿರುಗೇಟು ನೀಡಿದ್ದಾರೆ.

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಮೇಲಿನ ಕೇಸು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ
ಮೇಕೆದಾಟು ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಕೋರಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ, ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಮನವಿ
ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದೆ.

ಮೇಕೆದಾಟು ಯೋಜನೆಯಿಂದ ತಮಿಳು ನಾಡಿಗೆ ಹಾನಿಯಿಲ್ಲ: ಸಿಎಂ ಸಿದ್ದರಾಮಯ್ಯ
ತಮಿಳು ನಾಡಿಗೆ 123 ಟಿಎಂಸಿ ಅಡಿ ನೀರು ಬಿಡುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರ ಆದೇಶ ನೀಡಿದೆ. ಪ್ರಾಧಿಕಾರದ ಸಭೆಗಳಲ್ಲಿ ವಿರೋಧ ವ್ಯಕ್ತಪಡಿಸಿದ್ದೇವೆ. ನಮ್ಮ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಬಜೆಟ್ 2023: 'ಇದೊಂದು ಕೆಟ್ಟ ಯೋಜನೆ'; ಮೇಕೆದಾಟು ಯೋಜನೆಗೆ ನಟ ಚೇತನ್ ವಿರೋಧ
ಕರ್ನಾಟಕ ಸರ್ಕಾರದ ಉದ್ದೇಶಿದ ಮೇಕೆದಾಟು ಯೋಜನೆಗೆ ನಟ-ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ಕೆಟ್ಟ ಯೋಜನೆ ಎಂದು ಟೀಕಿಸಿದ್ದಾರೆ.

ಮೇಕೆದಾಟು ಯೋಜನೆ ಬದಲು ಬೆಂಗಳೂರಿನ ರಾಜ ಕಾಲುವೆಗಳನ್ನು ಪುನಶ್ಚೇತನಗೊಳಿಸಿ: ಪರಿಸರವಾದಿಗಳ ಸಲಹೆ
ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮೇಕೆದಾಟು ಜಲಾಶಯದ ಯೋಜನೆಗೆ ಮುಂದಾಗುವ ಬದಲು ಬೆಂಗಳೂರಿನ ರಾಜ ಕಾಲುವೆಗಳು ಮತ್ತು ಹಾಳಾದ ಕೆರೆಗಳನ್ನು ಪುನಶ್ಚೇತನಗೊಳಿಸಲು ಪರಿಸರವಾದಿಗಳು ಸಲಹೆ ನೀಡಿದ್ದಾರೆ.

ಮೇಕೆದಾಟು ಯೋಜನೆ: ತಮಿಳುನಾಡಿನ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ; ಡಿಕೆ ಶಿವಕುಮಾರ್
ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದ್ದು, ಯೋಜನೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಇದೀಗ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ.

