ರಾಜ್ಯಮೇಕೆದಾಟು ಯೋಜನೆ: ತಮಿಳುನಾಡಿನ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ; ಡಿಕೆ ಶಿವಕುಮಾರ್
ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದ್ದು, ಯೋಜನೆಯನ್ನು ವಿರೋಧಿಸುವುದಾಗಿ ತಿಳಿಸಿದೆ. ಇದೀಗ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ.