Mekedatu

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣ: ಡಿಸಿಎಂ ಡಿಕೆ ಶಿವಕುಮಾರ್
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಮೇಕೆದಾಟು ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದರು.

ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು: ಡಿಸಿಎಂ ಡಿ ಕೆ ಶಿವಕುಮಾರ್
ಮೇಕೆದಾಟು ವಿಚಾರವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಿಮ್ಮ ಸುಳ್ಳುಗಳ ದಾಹ ತಣಿಸಿಕೊಳ್ಳಲು ರಾಜಕಾರಣ ನಡೆಸಿದ್ದೀರಿ, ಮೊದಲು ನಿಮ್ಮ ಆತ್ಮಾವಲೋಕನ ಮಾಡಿಕೊಳ್ಳಿ: ಕೇಂದ್ರ ಸರ್ಕಾರಕ್ಕೆ ಸಿಎಂ ತಿರುಗೇಟು
ಮೇಕೆದಾಟು ಯೋಜನೆ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಮಾತಿನ ಸಮರ ಮತ್ತೆ ಮುಂದುವರೆದಿದ್ದು, ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ ಎಂಬ ಕೇಂದ್ರ ಸರ್ಕಾರದ ಹೇಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಮೇಕೆದಾಟು ಯೋಜನೆ ಮತ್ತು ಸಂಕಷ್ಟ ಸೂತ್ರದಿಂದ ಕಾವೇರಿ ನೀರಿನ ಸಮಸ್ಯೆ ಇತ್ಯರ್ಥ ಸಾಧ್ಯ: ಸಿಎಂ ಸಿದ್ದರಾಮಯ್ಯ
ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ಕರ್ನಾಟಕ-ತಮಿಳುನಾಡು ನಡುವಿನ ನೀರಿನ ಸಮಸ್ಯೆ ಬಗೆಹರಿಸಬಹುದು. ಮೇಕೆದಾಟು ಅಣೆಕಟ್ಟು ನಿರ್ಮಿಸಿದರೆ 67 ಟಿಎಂಸಿ ನೀರು ಸಂಗ್ರಹಿಸಬಹುದು. ಮಳೆ ಕೊರತೆ ಸಂದರ್ಭದಲ್ಲಿ ಉಭಯ ರಾಜ್ಯಗಳು ನೀರು ಬಳಸಬಹುದು ಎಂದು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಲು ಮೇಕೆದಾಟು ಯೋಜನೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ
68 ಟಿಎಂಸಿ ಅಡಿ ಕಾವೇರಿ ನೀರು ಸಂಗ್ರಹಿಸಲು ಉದ್ದೇಶಿಸಿರುವ ಮೇಕೆದಾಟು ಯೋಜನೆಯಿಂದ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಲು ಕರ್ನಾಟಕಕ್ಕೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.

ಮೇಕೆದಾಟು ಅಣೆಕಟ್ಟು ಯೋಜನೆ: 60 ದಿನಗಳಲ್ಲಿ ಸಮೀಕ್ಷೆ ಪೂರ್ಣ ಸಾಧ್ಯತೆ!
ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಾಶ್ವತ ಕುಡಿಯುವ ನೀರು ಪೂರೈಕೆ ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೇಕೆದಾಟು ಯೋಜನೆಗೆ ಭೂಮಿ ಹಾಗೂ ಮರಗಳ ಎಣಿಕೆ ಕುರಿತು ಆರಂಭವಾದ ಸಮೀಕ್ಷೆಯ 60 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿದುಬಂದಿದೆ.

ಮೇಕೆದಾಟು ಯೋಜನೆ: ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ಮರಗಳ ಎಣಿಕೆಗೆ ಶೀಘ್ರದಲ್ಲೇ ಸಮೀಕ್ಷೆ ಆರಂಭ
ಕಾವೇರಿಗೆ ಅಡ್ಡಲಾಗಿ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಉತ್ಸುಕವಾಗಿರುವ ರಾಜ್ಯ ಸರ್ಕಾರ, ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ಮರಗಳ ಎಣಿಕೆಗೆ ಶೀಘ್ರದಲ್ಲೇ ಸಮೀಕ್ಷೆಯನ್ನು ಆರಂಭಿಸಲಿದೆ ಎಂದು ತಿಳಿದುಬಂದಿದೆ.

ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಸರ್ಕಾರ ಮುಂದು: ಹೆಚ್.ಡಿ.ದೇವೇಗೌಡ ವಿರೋಧ
ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ವಿರೋಧಿಸಿದ್ದು, ಸಂವಿಧಾನದ ಬದ್ಧವಾಗಿ ನಿಲ್ಲುವುದಾಗಿ ಗುರುವಾರ ಹೇಳಿದ್ದಾರೆ.

ಕರ್ನಾಟಕದ ಮೇಕೆದಾಟು ಅಣೆಕಟ್ಟು ಪ್ರಸ್ತಾವನೆಗೆ ಅನುಮೋದನೆ ನೀಡಬೇಡಿ: ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ
ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರಕ್ಕೆ ತಾಂತ್ರಿಕ ಮತ್ತು ಪರಿಸರ ಅನುಮತಿ ನೀಡದಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

