Mekedatu

ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡಲು ರಾಜ್ಯಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಸೂಚನೆ
ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ ಎನ್ನಲಾಗಿದೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರದ ವಿಳಂಬ ನೀತಿ: ಹೆಚ್.ಡಿ. ಕುಮಾರಸ್ವಾಮಿ ಕಳವಳ
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಕಳವಳ ವ್ಯಕ್ತಪಡಿಸಿದ್ದಾರೆ.

ನೆಲ, ಜಲ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಸಿಎಂ ಬೊಮ್ಮಾಯಿ
‘ರಾಜ್ಯದ ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ಯಾರೊಂದಿಗೂ ನಾನು ರಾಜಿ ಆಗುವುದಿಲ್ಲ. ಮೇಕೆದಾಟು ಯೋಜನೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೇಕೆದಾಟು ವಿಚಾರದಲ್ಲಿ ಬಿಜೆಪಿ ನಾಯಕ ಯೂಟರ್ನ್: ಕನ್ನಡಿಗರ ಕಣ್ಣು ಕೆಂಪಗಾಗಿಸಿದ ಸಿಟಿ ರವಿ ಹೇಳಿಕೆ!
ಮೇಕೆದಾಟು ಯೋಜನೆ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಯೂ ಟರ್ನ್ ಹೊಡೆದಿದ್ದು, ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ನೀಡಿದ ಹೇಳಿಕೆಯೊಂದು ಇದೀಗ ಕನ್ನಡಿಗರ ಕಣ್ಣು ಕೆಂಪಗಾಗುವಂತೆ ಮಾಡಿದೆ.

ಮೇಕೆದಾಟು ಯೋಜನೆ ಕುರಿತ ತಮಿಳುನಾಡಿನ ರಾಜಕಾರಣ ಸರಿಯಲ್ಲ: ಸಿಎಂ ಬೊಮ್ಮಾಯಿ
ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಈ ವಿಚಾರದಲ್ಲಿ ತಮಿಳುನಾಡು ಮಾಡುತ್ತಿರುವ ರಾಜಕಾರಣ ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಮೇಕೆದಾಟು ಯೋಜನೆಯಲ್ಲಿ ಯಾವುದೇ ರಾಜಿ ಇಲ್ಲ: ಸಿಎಂ ಬೊಮ್ಮಾಯಿ
ಮೇಕೆದಾಟು ಯೋಜನೆಯಲ್ಲಿ ಯಾವುದೇ ರೀತಿಯ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹ: ಆ.5ರಂದು 'ಆಪ್' ನಾಯಕರಿಂದ ಉಪವಾಸ ಸತ್ಯಾಗ್ರಹ
ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿ ಖಂಡಿಸಿ ಆ.5 ರಂದು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ರಾಜ್ಯದ ಆಮ್ ಆದ್ಮಿ ಪಕ್ಷದ ನಾಯಕರು ತಿಳಿಸಿದ್ದಾರೆ.

ರಾಜಕಾರಣಿಗಳು ಹೇಳಿಕೆ ಕೊಡುವುದು ಬಿಟ್ಟು ಡಿಪಿಆರ್ ಸಿದ್ಧಪಡಿಸುವತ್ತ ಹೆಚ್ಚು ಒತ್ತು ನೀಡಬೇಕು: ಪ್ರತಾಪ್ ಸಿಂಹ
ನಮ್ಮ ರಾಜಕಾರಣಿಗಳು ಮೇಕೆದಾಟು ಯೋಜನೆ ಕುರಿತು ಹೇಳಿಕೆ ಕೊಡುವುದು ಬಿಟ್ಟು ಡಿಪಿಆರ್ ಸಿದ್ಧಪಡಿಸುವತ್ತ ಹೆಚ್ಚಿನ ಒತ್ತು ನೀಡಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಹೇಳಿದ್ದಾರೆ.

ನಮ್ಮ ಸಹಕಾರವಿದೆ, ತಡ ಮಾಡದೆ ಮೇಕೆದಾಟು ಯೋಜನೆ ಆರಂಭಿಸಿ: ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್
ಮೇಕೆದಾಟು ಯೋಜನೆಗೆ ನಾವು ಸಹಕಾರ ನೀಡುತ್ತೇವೆ. ತಡ ಮಾಡದೆ ಸರ್ಕಾರ ಯೋಜನೆ ಆರಂಭಿಸಲಿ ಎಂದು ರಾಜ್ಯ ಕಾಂಗ್ರೆಸ್ ಶನಿವಾರ ಹೇಳಿದೆ.

