Mekedatu

ಯಾರೇ ಊಟ ಬಿಟ್ಟರೂ ನಾವು ಮೇಕೆದಾಟು ಬಿಡಲ್ಲ: ತ.ನಾಡು ಅಣ್ಣಾಮಲೈ ಉಪವಾಸ ಸತ್ಯಾಗ್ರಹಕ್ಕೆ ಸಿಎಂ ಬೊಮ್ಮಾಯಿ ತೀಕ್ಷ್ಣ ಪ್ರತಿಕ್ರಿಯೆ
ಮೇಕೆದಾಟಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರ ನಡೆಸುವುದಾಗಿ ಹೇಳಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ-ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ?: ಮೇಕೆದಾಟು ವಿಚಾರವಾಗಿ ಕುಮಾರಸ್ವಾಮಿ ಸರಣಿ ಟ್ವೀಟ್
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ತೀವ್ರ ತಿಕ್ಕಾಟಕ್ಕೆ ಕಾರಣವಾಗಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರವಾಗಿ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.

'ಪ್ರಸ್ತುತ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ': ಕರ್ನಾಟಕಕ್ಕೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ
ಹಾಲಿ ಪರಿಸ್ಥಿತಿಯಲ್ಲಿ ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.

ಮೇಕೆದಾಟು ಯೋಜನೆ: ಕರ್ನಾಟಕ, ತಮಿಳು ನಾಡು ಮಧ್ಯೆ ಮತ್ತೊಂದು ರಾಜಕೀಯ ಜಿದ್ದಾಜಿದ್ದಿ
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮತ್ತೆ ಕರ್ನಾಟಕ ಮತ್ತು ತಮಿಳು ನಾಡು ನಡುವೆ ರಾಜಕೀಯ ಕದನಕ್ಕೆ ಕಾರಣವಾಗಿದೆ. ಬೆಂಗಳೂರಿನಿಂದ 100 ಕಿಲೋ ಮೀಟರ್ ದೂರದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟುವ ಸಂಬಂಧ ಎರಡೂ ರಾಜ್ಯಗಳ ನಡುವೆ ವೈಮನಸ್ಸಿಗೆ ಕಾರಣವಾಗಿದೆ.

ತಮಿಳುನಾಡು ಒಪ್ಪಿಗೆ ಇಲ್ಲದೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳದಿರಲು ಕೇಂದ್ರದ ಭರವಸೆ: ದುರೈ ಮುರುಗನ್
ತಮಿಳುನಾಡಿನ ಒಪ್ಪಿಗೆಯಿಲ್ಲದೆ ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಹೇಳಿದ್ದಾರೆ.

ಮೇಕೆದಾಟು ಯೋಜನೆಗೆ ಅಡ್ಡಿ ಬೇಡ; ತಮಿಳುನಾಡು ಸಿಎಂ ಸ್ಟಾಲಿನ್ಗೆ ಪತ್ರ ಬರೆದ ಸಿಎಂ ಯಡಿಯೂರಪ್ಪ
ಮೇಕೆದಾಟು ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಕರ್ನಾಟಕದ ಯೋಜನೆಯಿಂದ ತಮಿಳುನಾಡಿನ ಹಿತಾಸಕ್ತಿಗೆ ಯಾವುದೇ ರೀತಿಯಿಂದಲೂ ಧಕ್ಕೆಯಾಗದು. ಹೀಗಾಗಿ ಈ ಯೋಜನೆಗೆ ಅಡ್ಡಿಪಡಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದಾರೆ.

ಮೇಕೆದಾಟು ಯೋಜನೆ ಪರಿಶೀಲನೆಗೆ ಜಂಟಿ ಸಮಿತಿ ರಚನೆ; ಎನ್ ಜಿಟಿ ಆದೇಶ ಪ್ರಶ್ನಿಸಿ ಮೇಲ್ಮನವಿ: ಬೊಮ್ಮಾಯಿ
ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪರಿಶೀಲನೆಗೆ ಜಂಟಿ ಸಮಿತಿ ರಚಿಸುವ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದಕ್ಷಿಣ ಶಾಖೆಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ.

ಮೇಕೆದಾಟು ಬಿಕ್ಕಟ್ಟು: ಕಾನೂನು ತಜ್ಞರ ಸಲಹೆ ಪಡೆಯಲು ಸಿಎಂ ಯಡಿಯೂರಪ್ಪ ನಿರ್ಧಾರ
ಮೇಕೆದಾಟು ಯೋಜನೆ ವಿಚಾರವಾಗಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು ದಿನಪತ್ರಿಕೆ ವರದಿ ಆಧರಿಸಿ ರಚನೆ ಮಾಡಿರುವ ಸಮಿತಿ ವಿರುದ್ಧ ಕಾನೂನು ಹೋರಾಟದ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕಾನೂನು ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಕಾವೇರಿ ವಿವಾದ: ಮೇಕೆದಾಟುವಿನಲ್ಲಿ ಅಕ್ರಮ ನಿರ್ಮಾಣ ಆರೋಪದ ತನಿಖೆಗೆ ಎನ್ ಜಿಟಿ ಸಮಿತಿ ರಚನೆ
ಮೇಕೆದಾಟುವಿನಲ್ಲಿ ಅನಧಿಕೃತ ನಿರ್ಮಾಣ ಚಟುವಟಿಕೆಗಳ ಆರೋಪ ಪರಿಶೀಲಿಸಲು ಜಂಟಿ ಸಮಿತಿಯೊಂದನ್ನು ರಾಷ್ಟ್ರೀಯಹಸಿರು ನ್ಯಾಯಾಧೀಕರಣ ನೇಮಿಸಿದೆ. ಅಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರ ಪ್ರಸ್ತಾಪಿಸಿತ್ತು.

