MES

ಬೆಳಗಾವಿ ಗಡಿಯಲ್ಲಿ ಶಿವಸೇನೆ ಪುಂಡಾಟಿಕೆ: 50ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸರ ವಶ
ನವೆಂಬರ್ 1 ಕನ್ನಡ ರಾಜ್ಯೋತ್ಸವ ಬಂತೆಂದರೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(MES)ಯ, ಶಿವಸೇನೆ ಪುಂಡಾಟಿಕೆ ಮೆರೆಯುವುದು ಸಾಮಾನ್ಯವಾಗಿದೆ.

ಕನ್ನಡ ರಾಜ್ಯೋತ್ಸವ: ನ.1ರಂದು 'ಕರಾಳ ದಿನ' ಆಚರಣೆಗೆ ಎಂಇಎಸ್ ನಿರ್ಧಾರ; ಮಹಾ ಸಿಎಂ ಏಕನಾಥ್ ಶಿಂಧೆ ಬೆಂಬಲ
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಳೆಯದು. ಪ್ರತಿ ವರ್ಷ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ಆಗಮಿಸುತ್ತಿದ್ದಂತೆ ನೆರೆಯ ಮಹಾರಾಷ್ಟ್ರ ಗಡಿ ಜಿಲ್ಲೆ ವಿವಾದಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆಯುತ್ತಲೇ ಇರುತ್ತದೆ.

ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯಿಂದ ಮತದಾರರಿಗೆ ಲಂಚ: ಎಂಇಎಸ್ ಅಭ್ಯರ್ಥಿ ರಮಾಕಾಂತ್ ಕೊಂಡುಸ್ಕರ್ ಆರೋಪ
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಯೊಬ್ಬರ ಬೆಂಬಲಿಗರು ಮನೆ ಮನೆಗೆ ತೆರಳಿ ತಮಗೆ ಮತ ನೀಡುವಂತೆ ಹಣ ನೀಡಿ ಆಮಿಷವೊಡ್ಡಿದ್ದರು ಎಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅಭ್ಯರ್ಥಿ ರಮಾಕಾಂತ್ ಕೊಂಡುಸ್ಕರ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಬಿಜೆಪಿಗೆ ಎಂಇಎಸ್ ಸವಾಲು; ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕೇಸರಿ ಪಾಳಯಕ್ಕೆ ಸಂಕಷ್ಟ
ಬೆಳಗಾವಿಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ಸಮಸ್ಯೆಯನ್ನು ಜೀವಂತವಾಗಿಡಲು ಶ್ರಮಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್) ಜಿಲ್ಲೆಯ ನಾಲ್ಕು ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿಯ ಅದೃಷ್ಟವನ್ನು ಹಾಳುಮಾಡುವ ಸಾಧ್ಯತೆಯಿದೆ.

ಎಂಇಎಸ್ ಕಿಡಿಗೇಡಿಗಳ ಸಂಘಟನೆ: ಸಿಎಂ ಬೊಮ್ಮಾಯಿ
ಎಂಇಎಸ್ ಕಿಡಿಗೇಡಿಗಳ ಸಂಘಟನೆಯಾಗಿದ್ದು, ಚುನಾವಣೆ ವೇಳೆ ಎಂಇಎಸ್‌ನವರು ಜನರ ಮನಸ್ಸನ್ನು ಕೆಡಿಸುವ ಗಿಮಿಕ್ ಮಾಡುತ್ತಾರೆ. ಬೆಳಗಾವಿ ಜನರಿಗೆ ಇದೆಲ್ಲಾ ಗೊತ್ತಿದೆ. ಇದಕ್ಕೆ ಜನರೇ ಉತ್ತರ ಕೊಡುತ್ತಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ಸೋತಿರುವುದು ದುರದೃಷ್ಟಕರ, ಮರಾಠಿಗರಿಗೆ ಮಾಡಿರುವ ದ್ರೋಹ: ಶಿವಸೇನೆ ಮುಖಂಡ ಸಂಜಯ್ ರಾವತ್
ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಾಗರ ಪಾಲಿಕೆ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸೋತಿರುವುದು ದುರದೃಷ್ಟಕರ ಎಂದು ಶಿವಸೇನೆ ಮುಖಂಡ ಹಾಗೂ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಬೆಳಗಾವಿ: ಬಿಜೆಪಿ-ಕಾಂಗ್ರೆಸ್'ನಿಂದ ಉದ್ಘಾಟನೆಗೊಂಡ ಶಿವಾಜಿ ಪ್ರತಿಮೆ ಶುದ್ಧೀಕರಣಕ್ಕೆ ಎಂಇಎಸ್ ಮುಂದು
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡ ಕೋಟೆಯಲ್ಲಿ ಈಚೆಗಷ್ಟೇ ಲೋಕಾರ್ಪಣೆಯಾದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಅಪಚಾರ ಮಾಡಿದ್ದು, ಮಾರ್ಚ್ 19ರಂದು ಇಡೀ ದಿನ ಪ್ರತಿಮೆ ಶುದ್ಧೀಕರಣ ನಡೆಸುವುದಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತಿಳಿಸಿದೆ.

ಗಡಿ ವಿವಾದ: ಅನುಮತಿ ನಿರಾಕರಣೆ ಹಿನ್ನೆಲೆ ಎಂಇಎಸ್'ನ ಮಹಾಮೇಳಾವ್ ರದ್ದು, ಪ್ರತಿಭಟನೆಗಿಳಿದ ಎಂಇಎಸ್
ವಿಧಾನ ಮಂಡಲ ಚಳಿಗಾಲ ಅಧಿವೇಶನದಂದು ಕರ್ನಾಟಕ ಸರ್ಕಾರಕ್ಕೆ ಸಡ್ಡು ಹೊಡೆಯಲು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮರಾಠಿ ಮಹಾಮೇಳಾವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಸೋಮವಾರ ನಡೆಯಬೇಕಿದ್ದ ಮಹಾಮೇಳಾವ ರದ್ದುಗೊಂಡಿದೆ.

ಬೆಳಗಾವಿ ಗಡಿ ವಿವಾದದಲ್ಲಿ ಎಂಇಎಸ್ ಪುಂಡಾಟಿಕೆಯನ್ನು ನಿಯಂತ್ರಿಸುವುದು ಹೇಗೆ ಎಂದು ನಮಗೆ ಗೊತ್ತಿದೆ: ಸಿಎಂ ಬೊಮ್ಮಾಯಿ
ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದಲ್ಲಿ ಅನಗತ್ಯವಾಗಿ ಮೂಗು ತೂರಿಸಿಕೊಂಡು ಬರುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡಾಟಿಕೆಯನ್ನು ಹದ್ದುಬಸ್ತಿನಲ್ಲಿಡುವುದು ಹೇಗೆ ಎಂದು ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

