ದೇಶಅನ್ ಲಾಕ್ 3: ಆ. 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ, ರಾತ್ರಿ ಕರ್ಫ್ಯೂ ತೆರವು
ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಂಟೈನ್ಮೆಂಟ್ ಜೋನ್ಗಳನ್ನು ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಅನ್ನು ಸಹ ತೆರವುಗೊಳಿಸಲಾಗಿದೆ.